ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದ್ದು, ಬರಗಾಲದಿಂದ ಕಂಗಾಲಾಗಿರುವ ರೈತರು ಮತ್ತು ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದೆ ಎಂದು ಕೇಂದ್ರ ಬೃಹತ್‌ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಕ್ಕೆ ಬಂದ ದಿನದಿಂದಲೂ ಕಾಂಗ್ರೆಸ್ ಶಾಸಕರು ಕೇವಲ ಕುರ್ಚಿ ಉಳಿವು ಮತ್ತು ಮಂತ್ರಿಗಿರಿಗಾಗಿ ಕಾಲಹರಣ ಮಾಡುತ್ತಿದ್ದಾರೆ. ಜನಪರ ಕಾಳಜಿಯನ್ನು ಸಂಪೂರ್ಣವಾಗಿ ಮರೆತು ರಾಜ್ಯದ ಅಭಿವೃದ್ಧಿಯನ್ನು ಹಿನ್ನಡೆಗೆ ತಳ್ಳಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.



