Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷದ ಶಾಸಕರು 134, ಸಚಿವ ಸ್ಥಾನಮಾನ ಹೊಂದಿರುವವರ 149

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರ ಸಂಖ್ಯೆ: 134, ಸಚಿವ ಸ್ಥಾನಮಾನ ಹೊಂದಿರುವವರ ಸಂಖ್ಯೆ: 149 ಕ್ಕೂ ಅಧಿಕ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದರು.

"ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ" ಎನ್ನುವಂತೆ ಅಭಿವೃದ್ಧಿಗೆ ದುಡ್ಡಿಲ್ಲದಿದ್ದರೂ, ಸಿಕ್ಕಸಿಕ್ಕವರಿಗೆಲ್ಲ ನಿಗಮ ಮಂಡಳಿಗಳಲ್ಲಿ ಸಚಿವ ಸ್ಥಾನಮಾನ ಕೊಟ್ಟಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ತೆರಿಗೆ ಹಣವನ್ನ ಪೋಲು ಮಾಡುತ್ತಿದೆ.

ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳಿಗೆ ಅಭಿವೃದ್ಧಿ ನಿಗಮಗಳು ಸೇರಿದಂತೆ ಅನೇಕ ನಿಗಮ ಮಂಡಳಿಗಳು ಅನುದಾನವಿಲ್ಲದೆ ಸೊರಗುತ್ತಿವೆ. ಅಧ್ಯಕ್ಷರಿಗೆ ಗೂಟದ ಕಾರುಸಿಬ್ಬಂದಿಗೆ ಸಂಬಳ ಸಾರಿಗೆ ಕೊಡುವುದೊಂದೇ ಸಾಧನೆಯಾಗಿದೆ ಎಂದು ದೂರಿದರು.

ರಾಜ್ಯ ಕಂಡ ಅತ್ಯಂತ ದುರ್ಬಲ ಮತ್ತು ಅಸಮರ್ಥ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ಸಿಕ್ಕಸಿಕ್ಕವರಿಗೆ ಸಚಿವ ಸ್ಥಾನಮಾನ ಕೊಟ್ಟು ತಮ್ಮ ಸ್ವಾರ್ಥಕ್ಕಾಗಿ ರಾಜ್ಯದ ಜನರ ತೆರಿಗೆ ಹಣವನ್ನ ಪೋಲು ಮಾಡುತ್ತಿದ್ದಾರೆ.

ಸಿದ್ದರಾಮಯ್ಯನವರೇ, ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ಕರ್ನಾಟಕ ಉಳಿಸಿ ಎಂದು ವಿಪಕ್ಷ ನಾಯಕ ಅಶೋಕ್ ಆಗ್ರಹ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST