Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಅಪಪ್ರಚಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಆನಂದ್ ಸುವರ್ಣ ನೀಡಿದ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಯನ್ನು ಖಂಡಿಸಿ ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೇಸ್ ಪಕ್ಷದ ವಿವಿಧ ವಿಭಾಗಗಳ ಮುಖಂಡರು ಕಾರ್ಯಕರ್ತರು ಶುಕ್ರವಾರ ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಸದಸ್ಯಲಕ್ಷ್ಮೀಪತಿ ಹಾಗೂ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ, ಶಾಸಕ ಯಶ್ ಪಾಲ್ ಆನಂದ್‌ ಸುವರ್ಣ ಅವರು ರಾಹುಲ್ ಗಾಂಧಿ ಅವರನ್ನು 'ಡ್ರಗ್ ಅಡಿಕ್ಟ್' ಎಂದು ಸಾರ್ವಜನಿಕವಾಗಿ ಆರೋಪಿಸಿರುವುದನ್ನು ಖಂಡಿಸಿದರು.

ಬಳಿಕ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ ಪ್ರತಿಭಟನಾಕಾರರು, ಶಾಸಕನ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ರಾಹುಲ್ ಗಾಂಧಿ ಅವರ ಬಗ್ಗೆ ಮಾಡಿರುವ ಆರೋಪಕ್ಕೆ ಸೂಕ್ತ ಸಾಕ್ಷ್ಯ ಒದಗಿಸಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಸೇರಿದಂತೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಪ್ರಕರಣದಲ್ಲಿ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ನಗರಸಭೆ ಸದಸ್ಯ ಆನಂದ್, ಯುವ ಕಾಂಗ್ರೆಸ್‌ ತಾಲೂಕು ಪ್ರಧಾನ ಕಾರ್ಯದರ್ಶಿ ಆ‌ರ್.ವಿ ಶಿವಕುಮಾ‌ರ್ ಸೇರಿದಂತೆ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟವರ ವಿರುದ್ಧ ಘೋಷಣೆಗಳನ್ನು ಕೂಗಿ, ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗುಋ ತಾಲ್ಲೂಕು ಕಾಂಗ್ರೇಸ್  ಕಾರ್ಯಕರ್ತರು ಪದಾಧಿಕಾರಿಗಳು ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!