ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ಸಿ.ಎಂ ಲೇಔಟ್ ನಿವಾಸಿ, ಪ್ರಸಿದ್ಧ ಬಿಲ್ಡಿಂಗ್ ಕಂಟ್ರಾಕ್ಟರ್ (ಮಾರ್ಬಲ್) ವಿ. ವೆಂಕಟೇಶ್ (80) ಅವರು ಭಾನುವಾರ ನಿಧನರಾಗಿದ್ದಾರೆ.
ಕಳೆದ ಹಲವು ದಶಕಗಳಿಂದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ, ಅದರಲ್ಲೂ ಮಾರ್ಬಲ್ ಕೆಲಸಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ವೆಂಕಟೇಶ್ ಅವರು ಗುಣಮುಖರಾಗದ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಮೃತರು ಪತ್ನಿ, ಪ್ರಥಮ ದರ್ಜೆ ಗುತ್ತಿಗೆದಾರ ವಿ.ಮಂಜುನಾಥ್ ಸೇರಿದಂತೆ ಇಬ್ಬರು ಪುತ್ರರು, ಒಬ್ಬ ಪುತ್ರಿ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ವಿವರ:
ಮೃತರ ಅಂತ್ಯಕ್ರಿಯೆಯು ಸೋಮವಾರ (ಏಪ್ರಿಲ್ 20) ಬೆಳಿಗ್ಗೆ 10:30 ಗಂಟೆಗೆ ನಗರದ ಹರಿಶ್ಚಂದ್ರ ಘಾಟ್ ಬಳಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


