Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಯಲಹಂಕದಲ್ಲಿ ಕೋಟಿ ವೆಚ್ಚದಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಲಹಂಕದಲ್ಲಿ 5754 ಕೋಟಿ ವೆಚ್ಚದಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣವಾಗಲಿದ್ದು, ಇದು ಭಾರತದ ಅತಿದೊಡ್ಡ ಕೋಚಿಂಗ್ ಸೆಂಟರ್ ಆಗಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.


ಬೆಂಗಳೂರಿನ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಮಹತ್ವದ ರೈಲ್ವೆ ಯೋಜನೆಗಳ ಕುರಿತು ಅವರು ಮಾಹಿತಿ ನೀಡಿದರು.


ಈ ಮಹತ್ವದ ಯೋಜನೆಗೆ ಆರಂಭದಲ್ಲಿ ದೇವನಹಳ್ಳಿಯಲ್ಲಿ ಪ್ರಸ್ತಾಪಿಸಲಾಗಿದ್ದ ಈ ಯೋಜನೆ, ದೂರದ ಕಾರಣ ಯಲಹಂಕಕ್ಕೆ ಸ್ಥಳಾಂತರಗೊಂಡಿದೆ. ರೈಲ್ವೆ ಮಂಡಳಿಯು ಯಲಹಂಕದಲ್ಲಿ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಅನುಮೋದನೆ ನೀಡಿದೆ ಎಂದರು.


ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ 1370 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮಾಸ್ಟರ್ ಪ್ಲಾನ್ ಅನುಮೋದನೆ ಹಂತದಲ್ಲಿದೆ. ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಆಧುನೀಕರಣಕ್ಕಾಗಿ ತಲಾ 485-500 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸೋಮಣ್ಣ ತಿಳಿಸಿದರು.

ವೈಟ್‌ಫೀಲ್ಡ್‌ನಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದವರೆಗಿನ ನಾಲ್ಕು ಪಥದ ರೈಲ್ವೆ ಮಾರ್ಗ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ತುಮಕೂರು-ಬೆಂಗಳೂರು ನಾಲ್ಕು ಪಥದ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಿ ಕ್ಯಾಬಿನೆಟ್‌ಗೆ ಸಲ್ಲಿಸಲಾಗಿದೆ.
ವೈಟ್‌ಫೀಲ್ಡ್‌ನಿಂದ ಕೋಲಾರಕ್ಕೆ ನೇರ ರೈಲು ಸಂಪರ್ಕಕ್ಕಾಗಿ ಸಮೀಕ್ಷೆ ನಡೆಸಲು ಡಿಆರ್‌ಎಂ ಅವರಿಗೆ ಸೂಚನೆ ನೀಡಲಾಗಿದೆ ಎಂದು ರೈಲ್ವೆ ಸಚಿವ ಸೋಮಣ್ಣ ತಿಳಿಸಿದರು.


 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!