Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಸ್‍ವೈ ಅಭಿಮಾನೋತ್ಸವಕ್ಕೆ ಕ್ಷಣಗಣನೆ: ಚಿತ್ರದುರ್ಗದಲ್ಲಿ ಮೇ 9ಕ್ಕೆ 'ಅಭಿಮಾನೋತ್ಸವ'

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜಕೀಯ ಪ್ರವೇಶ ಮಾಡಿ 50 ವರ್ಷಗಳು ಪೂರ್ಣಗೊಂಡಿರುವುದರ ಅಂಗವಾಗಿ ಗೌರವಾರ್ಥವಾಗಿ ಆಯೋಜಿಸಲಾಗಿರುವ
'ಬಿಎಸ್‍ವೈ ಅಭಿಮಾನೋತ್ಸವ' ಬೃಹತ್ ಕಾರ್ಯಕ್ರಮದ ಸಿದ್ಧತೆಗಳು ಚುರುಕುಗೊಂಡಿದ್ದು, ಭಾನುವಾರ ಅಭಿಮಾನಿಗಳು, ವಿವಿಧ ಮಠಾಧೀಶರುಗಳು, ರಾಜಕೀಯ ನಾಯಕರ ಸಮ್ಮುಖದಲ್ಲಿ ಅದ್ಧೂರಿಯಾಗಿ ಭೂಮಿ ಪೂಜೆ ನೆರವೇರಿತು.

ಮೇ 9 ರಂದು ನಡೆಯಲಿರುವ ಈ ಐತಿಹಾಸಿಕ ಸಮಾವೇಶಕ್ಕೆ ಅಡಿಪಾಯ ಹಾಕುವ ಉದ್ದೇಶದಿಂದ, ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಯಡಿಯೂರಪ್ಪ ಅವರ ರಾಜಕೀಯ ಸಾಧನೆ ಮತ್ತು ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಈ 'ಅಭಿಮಾನೋತ್ಸವ' ಆಯೋಜನೆಯಾಗುತ್ತಿದ್ದು, ಭೂಮಿ ಪೂಜೆಯೊಂದಿಗೆ ಬೃಹತ್ ವೇದಿಕೆ ನಿರ್ಮಾಣ ಹಾಗೂ ಅಂತಿಮ ಸಿದ್ಧತೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

news_1777207458_3_357.webp

 

 
ಬಿಎಸ್ ವೈ
50 ವರ್ಷಗಳ ರಾಜಕೀಯ ಪಯಣ:
​ದಣಿವರಿಯದ ಧೀಮಂತ ನಾಯಕ
, ರೈತಬಂಧು ಬಿ.ಎಸ್. ಯಡಿಯೂರಪ್ಪನವರು ಸಕ್ರಿಯ ರಾಜಕಾರಣದಲ್ಲಿ ಅರ್ಧ ಶತಮಾನ ಪೂರೈಸಿರುವ ಹಿನ್ನೆಲೆಯಲ್ಲಿ, ರಾಜ್ಯದ ಜನತೆ ಮತ್ತು ಅಭಿಮಾನಿಗಳು ಸೇರಿ ಹಮ್ಮಿಕೊಂಡಿರುವ 'ಅಭಿಮಾನೋತ್ಸವ' ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.

​ಸಂತರ ಸಾನ್ನಿಧ್ಯದಲ್ಲಿ ಭೂಮಿಪೂಜೆ:
​ಕಾರ್ಯಕ್ರಮದ ವೇದಿಕೆ ನಿರ್ಮಾಣದ ಕಾಮಗಾರಿಗೆ ಶಾಸ್ತ್ರೋಕ್ತವಾಗಿ ಭೂಮಿಪೂಜೆ ನೆರವೇರಿಸಲಾಯಿತು. ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಸಂತರು ಮತ್ತು ಶರಣರ ದಿವ್ಯ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ಜರುಗಿತು.

​ಗಣ್ಯರ ಉಪಸ್ಥಿತಿ:
​ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಸಮಾರಂಭದಲ್ಲಿ ರಾಜ್ಯದ ಪ್ರಮುಖ ನಾಯಕರು ಭಾಗವಹಿಸಿದ್ದರು.

​ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ​ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ​ಸಂಸದರು ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ​ಮಾಜಿ ಸಚಿವ ಬಿ. ಶ್ರೀರಾಮುಲು, ​ಮಾಜಿ ಸಂಸದರಾದ ಜಿ.ಎಂ. ಸಿದ್ದೇಶ್ವರ್, ಎ. ನಾರಾಯಣಸ್ವಾಮಿ ಸೇರಿದಂತೆ ಹಲವು ಮಠಾಧೀಶರುಗಳು, ಅಭಿಮಾನಿಗಳು, ಪಕ್ಷದ ಮುಖಂಡರು, ಶಾಸಕರುಗಳು, ಜಿಲ್ಲಾಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

​ವಿಶೇಷತೆ ಏನು?
​ಯಡಿಯೂರಪ್ಪನವರು ಕೇವಲ ಒಬ್ಬ ನಾಯಕರಾಗಿ ಉಳಿಯದೆ
, ರೈತರ ಪರವಾಗಿ ಹೋರಾಡಿದ 'ರೈತಬಂಧು' ಎಂದೇ ಖ್ಯಾತರಾದವರು. ಅವರ 50 ವರ್ಷಗಳ ಸುದೀರ್ಘ ಮತ್ತು ಸಾರ್ಥಕ ರಾಜಕೀಯ ಜೀವನವನ್ನು ಗೌರವಿಸಲು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮೈಲಿಗಲ್ಲಾಗುವ ನಿರೀಕ್ಷೆಯಿದೆ.
ಮುಂಬರುವ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಪ್ರಮುಖ ರಾಜಕೀಯ ಮುಖಂಡರು, ಕೇಂದ್ರ ಸಚಿವರು, ವಿವಿಧ ಪಕ್ಷಗಳ ನಾಯಕರು ಮತ್ತು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್. ಜೆ. ಸಿ. ಎಸ್ ಪ್ರೌಢಶಾಲೆಗೆ ಶೇ. ನೂರು ಫಲಿತಾಂಶಟ್ರಾಕ್ಟರ್ ಬೈಕ್ ಡಿಕ್ಕಿ ಬೈಕ್ ಸವಾರರ ಸಾವುಬಡಪ್ಪನಕಟ್ಟೆ  ಕಥೆ ಭಾಗ-5: ಕುಮಾರ್ ಬಡಪ್ಪಸಮಯ ಬಂದಾಗ ಎಲ್ಲವೂ ಗೊತ್ತಾಗಲಿದೆ; ನಾಯಕತ್ವ ಬದಲಾವಣೆಗೆ ಶಿವಕುಮಾರ್ ಮಾರ್ಮಿಕ ನುಡಿಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ಮೇ 2ಕ್ಕೆ ಹೈಕೋರ್ಟ್ ಆದೇಶದಂತೆ ಪ್ರಕ್ರಿಯೆ ಆರಂಭಟಿಸಿಎಸ್ ವರ್ಲ್ಡ್ 10K ಮ್ಯಾರಥಾನ್: ದಾಖಲೆ ಬರೆದ ಕ್ವಿಜೆರಾ; ಸಂಜೀವನಿ ಜಾಧವ್‌ಗೆ ಹ್ಯಾಟ್ರಿಕ್ ಸಾಧನೆಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ: ಡಿಸಿಎಂ ಶಿವಕುಮಾರ್ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ3ನೇ ಬಾರಿಯೂ ತಪ್ಪಿದ ವಿಮಾನದ ಸಕಾಲಿಕ ಲ್ಯಾಂಡಿಂಗ್; ಆಕಾಶದಲ್ಲೇ 40 ನಿಮಿಷ ಸುತ್ತಾಡಿದ ಪ್ರಯಾಣಿಕರು!ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90.47 ಫಲಿತಾಂಶ: ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ