Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆ.20ರಂದು ಡಿ.ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರರು, ಮಾಜಿ ಮುಖ್ಯಮಂತ್ರಿ ಶ್ರೀ ಡಿ.ದೇವರಾಜ ಅರಸುರವರ 111ನೇ ಜನ್ಮ ದಿನಾಚರಣೆ ಸಮಾರಂಭವನ್ನು ಇದೇ ಆಗಸ್ಟ್ 20ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ಆರ್ ತಂಗಡಗಿ,  ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ,

ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಆಯುಕ್ತ ಕೆ.ಎ.ದಯಾನಂದ ಭಾಗವಹಿಸುವರು. ಡಿ.ದೇವರಾಜ ಅರಸುರವರ ತತ್ವ ಮತ್ತು

ಚಿಂತನೆಗಳ ಬಗ್ಗೆ ಎಸ್‍ಜೆಎಂ ಕಾಲೇಜು ಉಪನ್ಯಾಸಕ ಎಸ್.ಲಕ್ಷ್ಮಿಕಾಂತ್ ಉಪನ್ಯಾಸ ನೀಡುವರು. ವಿಶೇಷ ಆಹ್ವಾನಿತರಾಗಿ ಶಿಕ್ಷಕ ತಜ್ಞ ಆರ್.ಎ.ಚೇತನ್ ರಾಮ್ ಅವರಿಂದ ಮೌಲ್ಯಾಧಾರಿತ ಶಿಕ್ಷಣ ಮತ್ತು ಸ್ವ ಅಭಿವೃದ್ಧಿಯ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಪುಷ್ಪಲತಾ ಭಾವಿಮಠ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!