Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿಕೆಶಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲೆಯ ಸುಂಕಾಪುರ ಸಮೀಪದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಹಾಗೂ ಅಧಿಕಾರಿಗಳ ಜೊತೆ ಪರಿಶೀಲಿಸಲಾಯಿತು ಎಂದು ಡಲಸಂಪನ್ಮೂಲ ಇಲಾಖೆ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ‌

ತುಮಕೂರು ಜಿಲ್ಲೆ ಸುಂಕಾಪುರದ ಟಿ.ಬಿ. ಕೆನಾಲ್ 70 ನೇ ಕಿ.ಮೀ.ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಶಾಸಕರಾದ ಗುಬ್ಬಿ ಶ್ರೀನಿವಾಸ್, ಡಾ. ರಂಗನಾಥ್ ಹಾಗೂ ಅಧಿಕಾರಿಗಳ ಜೊತೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕ್ಷೇತ್ರವೊಂದಕ್ಕೆ ಸೀಮಿತವಾಗದೆ, ನಾನು ಕರ್ನಾಟಕ ರಾಜ್ಯದ ನೀರಾವರಿ ಸಚಿವನಾಗಿ ತುಮಕೂರಿನ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ತುಮಕೂರು ನನಗೆ ಅತ್ಯಂತ ಹತ್ತಿರವಾದ ಜಿಲ್ಲೆ ಎಂದು ಡಿಸಿಎಂ ಹೇಳಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಮಂಜೂರಾತಿ ನೀಡಲಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಅವರ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಆಗ ಕೇವಲ 600 ಕೋಟಿ ರೂ.ಗಳಲ್ಲಿ ಮುಗಿಯಬೇಕಿದ್ದ ಈ ಕಾಮಗಾರಿಯ ವೆಚ್ಚ ಈಗ 1000 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ನಾವು ಈ ಯೋಜನೆಯ ಪೈಪ್‌ಗಳ ಖರೀದಿಗೆ 400 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ನಾಲ್ಕೈದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬಹುದು. ಸಮುದ್ರಕ್ಕೆ ಹರಿದು ಹೋಗುವ ನೀರನ್ನು ರೈತರ ಉಪಯೋಗಕ್ಕೆ ಬಳಸಿಕೊಳ್ಳಲು ಚಾನಲ್‌ಗಳ ಮೂಲಕ ನೀರು ಹರಿಸುವ ಕೆಲಸ ನಡೆಯಬೇಕು.

ನಮ್ಮ ಈ ಯೋಜನೆ ಒಂದು ಅಭಿವೃದ್ಧಿ ಕೆಲಸವಾಗಿದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ತುಮಕೂರು ಜಿಲ್ಲೆಯ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಯಾವುದೇ ರೈತರಿಗೆ ನೀರು ಹಂಚಿಕೆಯಲ್ಲಿ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಡಿಸಿಎಂ ಭರವಸೆ ನೀಡಿದರು.

ಹೋರಾಟಗಾರರಿಗೆ ನನ್ನದೊಂದು ವಿನಂತಿ, ನಾವು ಬೇರೆ ರಾಜ್ಯಗಳ ಜೊತೆ ನೀರಿಗಾಗಿ ಹೋರಾಟ ಮಾಡುವ ಹಾಗೆ ನಮ್ಮಲ್ಲೇ ಹೋರಾಟ ಮಾಡುವುದು ಬೇಡ. ನಾವೆಲ್ಲರೂ ಒಂದೇ ರಾಜ್ಯದವರು, ರಕ್ತ ಮತ್ತು ಸಂಬಂಧಗಳನ್ನು ಹಂಚಿಕೊಂಡಿದ್ದೇವೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕು.

ಈ ಯೋಜನೆಯಲ್ಲಿ ಒಂದು ತಾಲ್ಲೂಕಿಗೆ ಎಷ್ಟು ನೀರು ಒದಗಿಸಲಾಗಿದೆಯೋ ಅಷ್ಟನ್ನೇ ಬಳಸಿಕೊಳ್ಳಲು ಅವಕಾಶವಿದೆ. ಯಾವುದೇ ಅನಧಿಕೃತ ಗೇಟ್‌ಗಳನ್ನು ಹಾಕಲು ಅವಕಾಶವಿಲ್ಲ. 'ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಎಂಬ ತತ್ವದ ಮೇಲೆ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ