Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜನೆಗೆ ನಿರ್ಧಾರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
      ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ವಿವಿಧ ಪದಾಧಿಕಾರಿಗಳ ಪದಗ್ರಹಣ ನಗರದ ಸರ್ಕಾರಿ ನೌಕರರ ಸಂಘ ಭವನದ ಸಭಾಂಗಣದಲ್ಲಿ ನೆರವೇರಿತು.  ಅಲ್ಲದೆ ಬರುವ ಏಪ್ರಿಲ್ ೧೬ ಮತ್ತು ೧೭ ರಂದು ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜಿಸಲು ಇದೇ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

      ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ೨೦೨೪-೨೯ ರ ಅವಧಿಗೆ ಆಯ್ಕೆಯಾದ ನೂತನ ನಿರ್ದೇಶಕರಿಗೆ ಪದಾಧಕಾರಿಗಳ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಜಿಲ್ಲಾ ಶಾಖೆಗೆ ಅಧ್ಯಕ್ಷರಾಗಿ ಮಾಲತೇಶ ಮುದಜ್ಜಿ, ಜಿಲ್ಲಾ ಕಾರ್ಯದರ್ಶಿಯಾಗಿ ಶ್ರೀನಿವಾಸ ಆರ್., ಜಿಲ್ಲಾ ಖಜಾಂಚಿಯಾಗಿ ಮಲ್ಲಿಕಾರ್ಜುನ ಎ, ರಾಜ್ಯ ಪರಿಷತ್ ಸದಸ್ಯರಾಗಿ ರಾಜಪ್ಪ ಎಸ್ ಅವರು ಆಯ್ಕೆಯಾಗಿ, ಅಧಿಕಾರ ವಹಿಸಿಕೊಂಡಿದ್ದರು.  ಇದೀಗ ಜಿಲ್ಲಾ ಶಾಖೆಯ ವಿವಿಧ ಪದಾಧಿಕಾರಿಗಳ ಸ್ಥಾನಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದ್ದು,

ಗೌರವಾಧ್ಯಕ್ಷರನ್ನಾಗಿ ನಾರಾಯಣಸ್ವಾಮಿ  ಎಂ., ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಬಿ.ಟಿ., ಹಿರಿಯ ಉಪಾಧ್ಯಕ್ಷರಾಗಿ ಡಾ. ಚಂದ್ರಕಾಂತ್ ನಾಗಸಮುದ್ರ, ಉಪಾಧ್ಯಕ್ಷರಾಗಿ ತುಕಾರಾಂರಾವ್ ಬಿ.ವಿ., ವಿಮಲಾಕ್ಷಿ ಬಿ., ಪೂಜಾರ್ ಹೆಚ್. ರುದ್ರಮುನಿ ಬಿ., ನಯಾಜ್ ಅಹ್ಮದ್ ಖಾನ್, ಸಹ ಕಾರ್ಯದರ್ಶಿಯಾಗಿ ಯಶವಂತಕುಮಾರ್, ಸುನೀಲ್‌ಕುಮಾರ್ ಸೇರಿದಂತೆ ಜಂಟಿಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಸಾಂಸ್ಕೃತಿಕ ಕಾರ್ಯದರ್ಶಿಗಳು, ಕ್ರೀಡಾ ಕಾರ್ಯದರ್ಶಿಗಳು, ಆಂತರಿಕ ಲೆಕ್ಕ ಪರಿಶೋಧಕರು ಒಳಗೊಂಡಂತೆ ವಿವಿಧ ಪದಾಧಿಕಾರಿಗಳ ಹುದ್ದೆಗೆ ನೇಮಕಗೊಂಡವರ ಪದಗ್ರಹಣ ಸಮಾರಂಭದಲ್ಲಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು.

     ಬಳಿಕ ಜಿಲ್ಲಾ ಅಧ್ಯಕ್ಷ ಮಾಲತೇಶ್ ಮುದಜ್ಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜಿಸುವ ಬಗ್ಗೆ ಚರ್ಚಿಸಿ, ಎಲ್ಲ ನೌಕರ ವೃಂದದವರಿಗೂ ಅನುಕೂಲವಾಗುವಂತೆ ಕ್ರೀಡಾಕೂಟವನ್ನು ಏಪ್ರಿಲ್ ೧೬ ಮತ್ತು ೧೭ ರಂದು ಜರುಗಿಸಲು ನಿರ್ಧರಿಸಲಾಯಿತು.

ಒಳಾಂಗಣ ಮತ್ತು ಹೊರಾಂಗಣ ಸ್ಪರ್ಧೆಗಳನ್ನು ಆಯ್ಕೆ ಮಾಡಿಕೊಂಡು, ಎಲ್ಲಾ ತಾಲ್ಲೂಕುಗಳಿಂದ ರಾಜ್ಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು, ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ನೌಕರರಿಗೆ ಒಒಡಿ ಸೌಲಭ್ಯ ಕಲ್ಪಿಸುವುದು, ನೌಕರರು ಪಾಲ್ಗೊಳ್ಳಲು ಆನ್‌ಲೈನ್‌ನಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಲು ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು.  ನೌಕರರು ತಮ್ಮ ಕೆಜಿಐಡಿ ಸಂಖ್ಯೆಯೊಂದಿಗೆ ಆಯಾ ಕಚೇರಿ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ಹಾಜರುಪಡಿಸಬೇಕು. 

ಬೇಸಿಗೆ ಕಾಲವಾಗಿರುವುದರಿಂದ, ಕ್ರೀಡಾಂಗಣದಲ್ಲಿ ಕುಡಿಯುವ ನೀರು, ನೆರಳು, ತುರ್ತು ವೈದ್ಯಕೀಯ ನೆರವು, ಊಟೋಪಹಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಪ್ರತ್ಯೇಕವಾಗಿ ಉಪಸಮಿತಿಗಳನ್ನು ರಚಿಸಲು ನಿರ್ಧರಿಸಲಾಯಿತು.  ವಾರ್ಷಿಕ ಕ್ರೀಡಾಕೂಟ ಆಯೋಜನೆ ಕುರಿತಂತೆ ಸಂಬಂಧಪಟ್ಟ ಎಲ್ಲ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗುವುದು.  ಎಲ್ಲಾ ವೃಂದದ ನೌಕರರ ಸಹಭಾಗಿತ್ವದಲ್ಲಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ಉಪಸಮಿತಿಯವರು, ಪದಾಧಿಕಾರಿಗಳು ತಮಗೆ ವಹಿಸುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಿ ಸಹಕಾರ ನೀಡಬೇಕು ಎಂದು ಅಧ್ಯಕ್ಷ ಮಾಲತೇಶ ಮುದಜ್ಜಿ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

      ನೌಕರರ ಸಂಘಕ್ಕೆ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾಗಿರುವ ರಾಜೇಂದ್ರ ಚಕ್ರವರ್ತಿ ಅವರು ಮಾತನಾಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ವಾರ್ಷಿಕ ಕ್ರೀಡಾ ಕೂಟವನ್ನು ಆಯೋಜಿಸಿರುವುದು ನೌಕರರ ಹಿತದೃಷ್ಟಿಯಿಂದ ಸ್ವಾಗತಾರ್ಹವಾಗಿದೆ.  ನಾವೆಲ್ಲರೂ ಒಟ್ಟಾಗಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಸಹಕಾರ ನೀಡುತ್ತೇವೆ ಎಂದರು.

     ಜಿಲ್ಲಾ ಸಂಘದ ಕಾರ್ಯದರ್ಶಿ ಶ್ರೀನಿವಾಸ ಆರ್., ಖಜಾಂಚಿ ಮಲ್ಲಿಕಾರ್ಜುನ ಎ, ರಾಜ್ಯ ಪರಿಷತ್ ಸದಸ್ಯ ರಾಜಪ್ಪ ಎಸ್ ಸೇರಿದಂತೆ ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ನಿರ್ದೇಶಕರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.     

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!