Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕರ್ನಾಟಕದ ಆರ್ಥಿಕತೆಯ ಅಧೋಗತಿ: ಅಶೋಕ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಆರ್ಥಿಕತೆಯ ಅಧೋಗತಿ: ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಭವಿಷ್ಯ ಅಡಮಾನ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

“ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಇಂದು ಕರ್ನಾಟಕದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬ ಸ್ಥಿತಿ ನಿರ್ಮಿಸಿದೆ ಎಂದು ಅಶೋಕ್ ಟೀಕಿಸಿದ್ದಾರೆ.

ಜನರ ಕೆಂಗಣ್ಣಿಗೆ ಗುರಿಯಾಗಿ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಾಗಲೆಲ್ಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರನ್ನು ದಿಕ್ಕು ತಪ್ಪಿಸುವ ಚಳಿಯನ್ನು ಬಜೆಟ್‌ನಲ್ಲಿಯೂ ಮುಂದುವರೆಸಿರುವ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲೂ ಅದೇ ಚಾಳಿ ಪ್ರದರ್ಶನ ಮಾಡಿದ್ದಾರೆ. ರಾಜ್ಯದ ಆರ್ಥಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡಬೇಕಾದ ಬಜೆಟ್‌ನಲ್ಲಿ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಹೇಳುವ ಬದಲು ಕಟ್ಟು ಕಥೆಗಳನ್ನು ಹೇಳುತ್ತಾ ಕಾಲಹರಣ ಮಾಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಸಾಲದ ಪ್ರಮಾಣವೇ ಅದರ ಆರ್ಥಿಕ ನಿರ್ವಹಣೆಯ ನಿಜ ಮುಖವನ್ನು ಬಯಲಿಗೆಳೆಯುತ್ತದೆ. 2023–24ರಲ್ಲಿ ಸುಮಾರು 82,000 ಕೋಟಿ, 2024–25ರಲ್ಲಿ 1.05 ಲಕ್ಷ ಕೋಟಿ, 2025–26ರಲ್ಲಿ 1.16 ಲಕ್ಷ ಕೋಟಿ, ಮತ್ತು ಈಗ 2026–27ರ ಬಜೆಟ್ ಅಂದಾಜಿನಲ್ಲಿ 1.32 ಲಕ್ಷ ಕೋಟಿ ಸಾಲ ಮಾಡಲು ಯೋಜನೆ ರೂಪಿಸಲಾಗಿದೆ.


ಅಂದರೆ ಕೇವಲ ನಾಲ್ಕು ವರ್ಷಗಳಲ್ಲಿ ಈ ಸರ್ಕಾರವು ಸುಮಾರು 4.4 ಲಕ್ಷ ಕೋಟಿ ಹೊಸ ಸಾಲ ಮಾಡುವ ಪರಿಸ್ಥಿತಿ ಉಂಟುಮಾಡಿದೆ. ಇದು ಅಭಿವೃದ್ಧಿಗಾಗಿ ಮಾಡಿದ ಸಾಲವೇ? ಅಥವಾ ಚುನಾವಣಾ ಗ್ಯಾರಂಟಿಗಳಿಗಾಗಿ ರಾಜ್ಯದ ಭವಿಷ್ಯವನ್ನು ಗಿರವಿ ಇಟ್ಟ ಸಾಲವೇ ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ಕನ್ನಡಿಗನ ಮನಸ್ಸಿನಲ್ಲಿ ಮೂಡಿದೆ ಎಂದು ವಿಪಕ್ಷ ನಾಯಕರು ಪ್ರಶ್ನಿಸಿದ್ದಾರೆ.

ರಾಜ್ಯದ ಹಣಕಾಸಿನ ವಾಸ್ತವ ಸ್ಥಿತಿ ಇನ್ನಷ್ಟು ಆತಂಕಕಾರಿಯಾಗಿದೆ. 2026–27ರಲ್ಲಿ ಕರ್ನಾಟಕದ ಒಟ್ಟು ರಾಜಸ್ವ ಆದಾಯ ಸುಮಾರು 3.15 ಲಕ್ಷ ಕೋಟಿ ಆಗಿದ್ದರೆ, ಕೇವಲ ಸಂಬಳ, ಪಿಂಚಣಿ ಮತ್ತು ಬಡ್ಡಿ ಪಾವತಿಗೆ ಹೋಗುತ್ತಿರುವ ಮೊತ್ತವೇ ಸುಮಾರು 2.77 ಲಕ್ಷ ಕೋಟಿ. ಅಂದರೆ ರಾಜ್ಯದ ಆದಾಯದ ಸುಮಾರು 88% ಕೇವಲ ಕಮಿಟೆಡ್ ವೆಚ್ಚಗಳಿಗೆ ಹೋಗುತ್ತಿದೆ. ಇದರ ಪರಿಣಾಮವಾಗಿ ಈ ವರ್ಷ ರಾಜಸ್ವ ಕೊರತೆ 22,957 ಕೋಟಿ, ಮತ್ತು ವಿತ್ತೀಯ ಕೊರತೆ ಸುಮಾರು 1,09,998 ಕೋಟಿ ತಲುಪಿದೆ. ಅಭಿವೃದ್ಧಿ ಯೋಜನೆಗಳಿಗೆ ಹಣ ಮೀಸಲಿಡುವ ಬದಲು ಸಾಲದ ಬಲೆಗೆ ರಾಜ್ಯವನ್ನು ತಳ್ಳುತ್ತಿರುವುದು ಈ ಬಜೆಟ್‌ನ ಕಹಿ ಸತ್ಯ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಹಣಕಾಸಿನ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿತ್ತು. ರಾಜ್ಯದ ಸಾಲವು GSDP ಯ 25% ಒಳಗೆ ಇತ್ತು, ಫಿಸ್ಕಲ್ ಡೆಫಿಸಿಟ್ 3% ಒಳಗೆ ಇತ್ತು ಮತ್ತು ಹಲವಾರು ವರ್ಷಗಳಲ್ಲಿ ರಾಜಸ್ವ ಉಳಿಕೆ ಕೂಡ ಇತ್ತು. ಆದರೆ ಇಂದು ಸ್ಥಿತಿ ಸಂಪೂರ್ಣ ಬದಲಾಗಿದೆ. ಸಾಲ ಮಾಡಿ ಸಂಬಳ ಕೊಡುವ ಮಟ್ಟಕ್ಕೆ ರಾಜ್ಯವನ್ನು ತಳ್ಳಿರುವುದು ಈ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆರ್ಥಿಕ ದುರಾಡಳಿತದ ಸ್ಪಷ್ಟ ಉದಾಹರಣೆ. ಅಭಿವೃದ್ಧಿಯ ಬದಲು ಸಾಲ, ಆರ್ಥಿಕ ಶಿಸ್ತಿನ ಬದಲು ಅರಾಜಕತೆ, ದೂರದೃಷ್ಟಿಯ ಬದಲು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಕ್ಷುಲ್ಲಕ ರಾಜಕೀಯ, ಇದೇ ಸಿದ್ದರಾಮಯ್ಯ ಅವರ ಬಜೆಟ್‌ನ ನಿಜಸ್ವರೂಪವಾಗಿದೆ ಎಂದು ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ