Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಕಾರು ಸ್ಫೋಟ ಸಾವಿನ ಸಂಖ್ಯೆ 10ಕ್ಕೆ ಏರಿಕೆ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ರಾಷ್ಟ್ರರಾಜಧಾನಿ ದೆಹಲಿ ಕೆಂಪು ಕೋಟೆ ಬಳಿ ಐ
20 ಕಾರು ಸ್ಫೋಟಗೊಂಡಿದ್ದು ಘಟನೆಯಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಯಾಗಿದೆ.


ಸ್ಫೋಟ ಸಂಭವಿಸಿದ ಕಾರಣ ಇನ್ನೂ ಪತ್ತೆ ಆಗಿಲ್ಲ? ಕಾರಿನ ಹಿಂದುಗಡೆ ಅಳವಡಿಸಿದ್ದ ಸಿಎನ್‌ಜಿಯಿಂದ ಸ್ಫೋಟ ಸಂಭವಿಸಿತ್ತಾ? ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಯಾವ ಕಾರಿನಿಂದ ಈ ಕೃತ್ಯ ಸಂಭವಿಸಿದೆ ಎನ್ನುವುದನ್ನು ಪೊಲೀಸರು ನಿಖರವಾಗಿ ಪತ್ತೆ ಹೆಚ್ಚಿದ್ದಾರೆ.

ಸ್ಫೋಟ ನಡೆದ ಬೆನ್ನಲ್ಲೇ ಅಲರ್ಟ್‌ಆದ ಪೊಲೀಸರು ಮೊದಲು ರಸ್ತೆಯಲ್ಲಿರುವ 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.

ಈ ವೇಳೆ ಐ20 (i20)ನಿಂದ ಈ ಕೃತ್ಯ ನಡೆದಿದೆ ಎನ್ನುವುದು ಗೊತ್ತಾಗಿದೆ. ಐ20 ಕಾರಿನಿಂದ ಸ್ಫೋಟ ಸಂಭವಿಸಿದ ವಿಚಾರ ತಿಳಿಯುತ್ತಿದ್ದಂತೆ ಇಡೀ ದಿನ ಈ ಕಾರು ಎಲ್ಲೆಲ್ಲಿ ಓಡಾಡಿದೆ. ದೆಹಲಿಗೆ ಎಲ್ಲಿಂದ ಪ್ರವೇಶಿಸಿದೆ ಎಂಬ ಮಾಹಿತಿ ಕಲೆಹಾಕಲು ಮತ್ತಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಜಾಲಾಡಿದ್ದಾರೆ. ಆಗ ಮತ್ತಷ್ಟು ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ.

ಸ್ಫೋಟಗೊಂಡ ದಿನ ಅಂದರೆ ಸೋಮವಾರ(ನವೆಂಬರ್ 10) ಬೆಳ್ಳಗ್ಗೆಯಿಂದ ಸಂಜೆಯವರಗೆ ಕಾರಿನ ಸಂಚಾರದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗಿದೆ. ಪೊಲೀಸರು, ಸುಮಾರು 11 ಗಂಟೆಗಳ ಹಿಂದೆ ಫರಿದಾಬಾದ್‌ನಿಂದ ದೆಹಲಿಯ ಕೆಂಪು ಕೋಟೆಗೆ ಹೊರಟು ದಾರಿಯುದ್ದಕ್ಕೂ ಹಲವಾರು ಸ್ಥಳಗಳನ್ನು ಪರಿಶೀಲಿಸಿದ್ದಾರೆ.


ಎಲ್ಲಿಂದ ಕಾರು ಬಂತು?
ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ
, ಸೋಮವಾರ ಬೆಳಿಗ್ಗೆ 7:30ಕ್ಕೆ ಫರಿದಾಬಾದ್‌ನ ಏಷ್ಯನ್ ಆಸ್ಪತ್ರೆ ಹೊರಗೆ ಕಾರು ಬಂದಿದೆ. ನಂತರ ಬೆಳಿಗ್ಗೆ 8:13ಕ್ಕೆ ಕಾರು ಬದರ್ಪುರ್ ಟೋಲ್ ದಾಟಿ ದೆಹಲಿ ಪ್ರವೇಶಿಸಿದೆ. ಬೆಳಿಗ್ಗೆ 8:20ಕ್ಕೆ ಓಖ್ಲಾ ಕೈಗಾರಿಕಾ ಪ್ರದೇಶದ ಬಳಿಯ ಪೆಟ್ರೋಲ್ ಪಂಪ್ ಬಳಿ ಕಾರು ಕಾಣಿಸಿಕೊಂಡಿದೆ.

ಸೋಮವಾರ ಮಧ್ಯಾಹ್ನ 3:19ಕ್ಕೆ ಕಾರು ಕೆಂಪು ಕೋಟೆ ಸಂಕೀರ್ಣದ ಬಳಿಯ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿ ಸುಮಾರು ಮೂರು ಗಂಟೆಗಳ ಕಾಲ ಅಲ್ಲಿಯೇ ನಿಲುಗಡೆ ಮಾಡಲಾಗಿತ್ತು. ಸಂಜೆ 6:22ಕ್ಕೆ, ಕಾರು ಪಾರ್ಕಿಂಗ್ ಸ್ಥಳದಿಂದ ಹೊರಬಂದು ಕೆಂಪು ಕೋಟೆಯ ಕಡೆಗೆ ಹೋಗಿದೆ.

ಕೇವಲ 24 ನಿಮಿಷಗಳ ನಂತರ ಸಂಜೆ 6:52ಕ್ಕೆ ಕಾರು ಚಲಿಸುತ್ತಿರುವಾಗ ಭಾರಿ ಸ್ಫೋಟ ಸಂಭವಿಸಿದೆ ಎನ್ನುವ ಇಂಚಿಂಚು ಮಾಹಿತಿಯನ್ನು ಪೊಲೀಸರು ಹೆಕ್ಕಿ ತೆಗೆದಿದ್ದಾರೆ.

ಶಂಕಿತ 8 ಆರೋಪಿಗಳ ಬಂಧನ-
ದೆಹಲಿಯ ಕೆಂಪುಕೋಟೆ ಬಳಿ ಐ
20 ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ 8 ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.


ಶಂಕಿತ ಮುಜಮ್ಮಿಲ್​​, ವೈದ್ಯರು ಸೇರಿದಂತೆ 8 ಶಂಕಿತರನ್ನ ಬಂಧಿಸಿದ್ದಾರೆ. ಜೈಶ್​ ಎ ಮೊಹಮ್ಮದ್​, ಅನ್ಸರ್​​ ಘಜ್ವಲ್​ ಹಿಂದ್​ ಜೊತೆ ಸಂಪರ್ಕ ಹೊಂದಿರುವ ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ಚುರುಕುಗೊಂಡಿದೆ.


ಮೂರು ಗಂಟೆಗಳ ಕಾಲ ಸುನೆಹ್ರಿ ಮಸೀದಿ ಪಾರ್ಕಿಂಗ್ ಜಾಗದಲ್ಲಿ ಆತ ಕಾರನ್ನು ಪಾರ್ಕ್‌ಮಾಡಿದ್ದು ಯಾಕೆ ಎನ್ನುವುದೇ ಪೊಲೀಸರಿಗೆ ಯಕ್ಷ ಪ್ರಶ್ನೆಯಾಗಿದೆ. ಉದ್ದೇಶಪೂರ್ವಕವಾಗಿಯೇ ಕಾರನ್ನು ಪಾರ್ಕ್‌ಮಾಡಿದ್ದಾನೋ ಅಥವಾ ಬೇರೆ ಕಡೆ ಸ್ಫೋಟ ಮಾಡಲು ಆ ಜಾಗದಲ್ಲಿ ಕಾರು ನಿಲ್ಲಿಸಿದ್ದಾನೋ? ಅಥವಾ ಸ್ನೇಹಿತರು ಸಿಕ್ಕಿಬಿದ್ದಿದ್ದಕ್ಕೆ ಸಿಟ್ಟಾಗಿ ಈಗಲೇ ಸ್ಫೋಟ ಮಾಡಲು ನಿರ್ಧಾರ ತೆಗೆದುಕೊಂಡನೇ ಎನ್ನುವುದು ತನಿಖೆಯಿಂದ ಬೆಳಕಿಗೆ ಬರಬೇಕಿದೆ.

 



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST