ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಗೌನಹಳ್ಳಿ ಕೆರೆಯಿಂದ ಬಿರೇನಹಳ್ಳಿ ಹಾಗೂ ಜಾಲಿಕಟ್ಟೆ ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ತಕ್ಷಣವೇ ನೀರು ಹರಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ನಡೆಸುತ್ತಿರುವ ಧರಣಿ ಸತ್ಯಾಗ್ರಹವು 4ನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದ್ದು, ತಾಲೂಕಿನ ಜನಪ್ರತಿನಿಧಿಗಳು ಹಾಗೂ ಸರ್ಕಾರ ಕೂಡಲೇ ಸ್ಪಂದಿಸಿ ಕೆರೆಗಳಿಗೆ ನೀರು ಹರಿಸುವ ಕ್ರಮ ಕೈಗೊಳ್ಳಬೇಕು ಎಂದು ಪ್ರಬಲವಾಗಿ ಆಗ್ರಹಿಸಲಾಯಿತು.
ಸುದೀರ್ಘ ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ಈ ಭಾಗದ ರೈತರ ಹಾಗೂ ಗ್ರಾಮಸ್ಥರ ಜಲ ಸಂಕಷ್ಟ ನೀಗಿಸಲು ಭದ್ರಾ ಮೇಲ್ದಂಡೆ ಯೋಜನೆಯ ನೀರನ್ನು ನಿಗದಿತ ಕೆರೆಗಳಿಗೆ ಹರಿಸುವುದು ಅತ್ಯಗತ್ಯವಾಗಿದೆ.
ಈ ಸಂದರ್ಭದಲ್ಲಿ ಹೋರಾಟಗಾರರು, ಗ್ರಾಮದ ಹಿರಿಯರು, ಪ್ರಮುಖ ಮುಖಂಡರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.




