ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೆಹರೂ ಮೈದಾನದಲ್ಲಿ ಪ್ರಜಾಸೇವಾ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿ ವೀಕ್ಷಿಸಿದರು.
ಪ್ರಜಾಸೇವಾ ಅಭಿಯಾನದ ಅಂಗವಾಗಿ ವಿವಿಧ ಸರ್ಕಾರಿ ಇಲಾಖೆಗಳು ತಮ್ಮ ಯೋಜನೆಗಳು, ಸಾರ್ವಜನಿಕ ಸೇವೆಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲು ಮಳಿಗೆಗಳನ್ನು ಮಾಡಿದ್ದು, ಈ ಮಳಿಗೆಗಳ ಮೂಲಕ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ.
ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳು ಮತ್ತು ಸೇವೆಗಳ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ಜನರಿಗೆ ತಲುಪಿಸುವ ಉದ್ದೇಶದಿಂದ ಈ ಪ್ರದರ್ಶನ ಆಯೋಜಿಸಲಾಗಿದೆ. ಇದರಿಂದ ನಾಗರಿಕರು ತಮಗೆ ಲಭ್ಯವಿರುವ ಸರ್ಕಾರಿ ಸೌಲಭ್ಯಗಳು, ಯೋಜನೆಗಳು ಹಾಗೂ ಸೇವೆಗಳ ಕುರಿತು ಸುಲಭವಾಗಿ ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗಲಿದೆ.




