Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಾಸಕ ಧೀರಜ್ ಮುನಿರಾಜು ರವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಾಜಿ ಶಾಸಕ ವೆಂಕಟರಮಣಯ್ಯ ನವರ ಬೆಂಬಲಿಗರು ಹಾಲಿ ಶಾಸಕ ಧೀರಜ್ ಮುನಿರಾಜ್ ವಿರುದ್ಧ  ಇಲ್ಲಸಲ್ಲದ ಹೇಳಿಕೆ ಹಾಗು ವೈಯಕ್ತಿಕ  ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಸಮಂಜಸವಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾ ಶಿವಶಂಕರ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭಾ ಸದಸ್ಯ ಶಿವಶಂಕರ್ (ಶಂಕ್ರಿ) ಅವರು ಶಾಸಕರ ಬಗ್ಗೆ ತೀರಾ ಕೇವಲವಾಗಿ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಮಾಜಿ ಶಾಸಕರನ್ನು ಓಲೈಸುವ ಬರದಲ್ಲಿ ಶಾಸಕರ ಬಗ್ಗೆ ಮಾತನಾಡಿರುವುದು ಖಂಡನೀಯ. ಶಿವಶಂಕರ್ ಅವರು ಈಗಲೂ ಬಿಜೆಪಿ ಕಾರ್ಯಕರ್ತ ರಾಗಿದ್ದು, ಪಕ್ಷ ದಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪಗಳಿವೆ. 2021 ರಲ್ಲಿ ನಡೆದ ನಗರಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಹೊರತುಪಡಿಸಿ ಸ್ವತಂತ್ರ ಅಭ್ಯರ್ಥಿಗಳಿಗೆ ಸಹಕಾರ ನೀಡಿದ ಬಗ್ಗೆ ಎಲ್ಲರಿಗೂ ತಿಳಿದಿದೆ ಎಂದು ಅವರು ಆರೋಪಿಸಿದರು.

Advertisement

 ಶಿವಶಂಕರ್ ಅವರು ತಾವು ಬೆಳೆದು ಬಂದ ರಾಜಕೀಯ ಹಾದಿಯನ್ನು ಅರಿತು ಮಾತನಾಡಬೇಕು. ರಾಜಕೀಯ ನಿಂತ ನೀರಲ್ಲ. ಹಿಂದೆ ನಡೆದ ಬೆಳವಣಿಗೆಗಳನ್ನು ಮರೆತು ಇದೀಗ ಟೀಕೆ ಮಾಡುವುದು ಸರಿಯಲ್ಲ. ಬಿಜೆಪಿ ನಗರ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಏನು ಮಾಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ ಎಂದು ಪುಷ್ಪಾಶಿವಶಂಕರ್ ಹೇಳಿದರು.

 ಮಾಜಿ ಹಾಗೂ ಹಾಲಿ ಶಾಸಕರ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಆದರೆ ಶಾಸಕ ಧೀರಜ್ ಮುನಿರಾಜ್ ಅವರು ಈವರೆಗೆ ಉದ್ಧಟತನದಿಂದ ನಡೆದುಕೊಂಡಿಲ್ಲ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಟೀಕಿಸುವ ಬದಲು ರಾಜಕೀಯ ಹಾಗೂ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸುವುದು ಸೂಕ್ತ ಎಂದರು.

ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ಮಾತನಾಡಿ, ಸರ್ಕಾರಿ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಶಿಷ್ಟಾಚಾರದಂತೆ ಎಲ್ಲ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗುತ್ತಿದೆ. ಆದರೆ ಕಾರ್ಯಕ್ರಮಗಳಿಗೆ ಭಾಗವಹಿಸದೆ ರಾಜಕೀಯ ಟೀಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

 ನಮ್ಮ ಶಾಸಕರು ಯಾರ ಬಗ್ಗೆಯೂ ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರ ಸುತ್ತಮುತ್ತಲಿನವರು ಅವರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ. ಯಾರ ಮಾತನ್ನೂ ಕೇಳದೆ ತಮ್ಮ ಪಟಾಲಂ ಅನ್ನು ಸರಿದಾರಿಗೆ ತರಬೇಕು ಎಂದು ಹೇಳಿದರು.

 ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಂಚಣಿ ಸೇರಿದಂತೆ ಹಲವು ವಿಚಾರಗಳಲ್ಲಿ ಸಮಸ್ಯೆಗಳಿವೆ. ಈ ಬಗ್ಗೆ ಮಾತನಾಡುವ ಬದಲು ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಧೀರಜ್ ಮುನಿರಾಜ್ ಅವರು ಸರ್ಕಾರಿ ಅನುದಾನ ತರುವ ಸಂದರ್ಭದಲ್ಲಿ ಯಾರು ಅಡ್ಡಿಪಡಿಸುತ್ತಿದ್ದಾರೆ ಎಂಬುದನ್ನು ಜನರು ಗಮನಿಸುತ್ತಿದ್ದಾರೆ.

ಸದನದಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಪರವಾಗಿ ಶಾಸಕ ಧೀರಜ್ ಮುನಿರಾಜ್ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದನ್ನು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಸಕರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡಲಾಗುತ್ತಿದೆ. ಶಾಸಕರ ತೇಜೋವಧೆ ಮಾಡುವ ಪ್ರಯತ್ನಗಳನ್ನು ನಿಲ್ಲಿಸಬೇಕು ಎಂದು ಬಂತಿ ವೆಂಕಟೇಶ್ ಹೇಳಿದರು.

 ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಣ್ಣ,  ಎನ್. ಕೆ. ರಮೇಶ್, ನಗರಸಭಾ ಸದಸ್ಯರಾದ ಎಂ.ಜಿ. ಶ್ರೀನಿವಾಸ್, ಶಿವು, ಪದ್ಮನಾಭ್, ಸುಮಿತ್ರಾ ಆನಂದ್ ಪದ್ಮನಾಭ, ಶಿವರಾಜು, ನಾಗರತ್ನ, ವತ್ಸಲಾ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಕುಂಟೆ ಹೋಬಳಿಯ ಕೆರೆಗಳಿಗೆ ನೀರು ಹರಿಸಲು ಸಾರ್ವಜನಿಕರ ಆಗ್ರಹ; ಡಾ. ಟಿ.ಬಿ. ಜಯಚಂದ್ರ ಮುಖಾಂತರ ಶೀಘ್ರ ಕ್ರಮಕ್ಕೆ ನಿರೀಕ್ಷೆಶಾಸಕ ಧೀರಜ್ ಮುನಿರಾಜು ರವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯಆಯುರ್ವೇದ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳನ್ನು ಕೌನ್ಸಸಿಲಿಂಗ್ ಮೂಲಕ ಬೇರೆ ಕಾಲೇಜಿಗೆ ವರ್ಗಾವಣೆನಾಗೇನಹಳ್ಳಿ-ನೆಲಗುದಿಗೆ ಸಂಪರ್ಕ ರಸ್ತೆ ಸಂಪೂರ್ಣ ಗುಂಡಿ ಮಯಮದ್ಯಪಾನ ನಿಷೇಧದ ಪರವಾಗಿ ಮಠಾಧಿಪತಿಗಳ ಧೃಡ ನಿಲುವು ಜನಾಂದೋಲನ ರೂಪಿಸಿ-ಶ್ರೀ ಪಂಡಿತಾರಾಧ್ಯ ಶಿವಾಚಾರ್ಯಮಹಿಳೆಯರಿಗೆ ಬ್ಯೂಟಿಷಿಯನ್ ಉದ್ಯಮಶೀಲತಾಭಿವೃದ್ಧಿ ತರಬೇತಿಜ್ಯೋತಿ ದ್ಯಾಮೇಶ್, 2 ವರ್ಷದ ಮಗು ನಾಪತ್ತೆಮುಜರಾಯಿ ಇಲಾಖೆಗೆ ಕಣಿವೆಮಾರಮ್ಮ ದೇವಸ್ಥಾನ ಸೇರಿಸಲು ಮನವಿಪೌರ ಕಾರ್ಮಿಕರು ತಮ್ಮ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು- ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿದೇಗುಲದ ಅಭಿವೃದ್ಧಿಗೆ 2 ಲಕ್ಷ ಸಹಾಯಧನ ವಿತರಣೆ