Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 12ರಂದು ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ
, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಹಾಗೂ ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಮ್ಕೋ) ವತಿಯಿಂದ ರಾಷ್ಟ್ರೀಯ ವಯೋಶ್ರೀ ಯೋಜನೆ ಅಡಿ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮ ಇದೇ ಜುಲೈ 12ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಎಸ್‍ಎಸ್‍ಕೆಎಸ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಘನ ಉಪಸ್ಥಿತಿ ವಹಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಸಾಧನ ಸಲಕರಣೆಗಳ ವಿತರಣೆ ಮಾಡುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.