Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯಲ್ಲದಕೆರೆ ಪಶು ಆಸ್ಪತ್ರೆಯಲ್ಲಿ ಕೇವಲ 200 ಮೇವಿನ ಬೀಜದ ಪ್ಯಾಕೆಟ್ ವಿತರಣೆ–ಜಯಪ್ರಕಾಶ್

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕನ್ನು ಈಗಾಗಲೇ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು
, ಈ ಭಾಗದ ರೈತರ ಜಾನುವಾರುಗಳಿಗೆ ತಕ್ಷಣ ಮೇವು ಒದಗಿಸುವುದು ತೀರಾ ಅಗತ್ಯವಾಗಿದೆ. ಆದರೆ ಯಲ್ಲದಕೆರೆ ಪಶು ಆಸ್ಪತ್ರೆ ವ್ಯಾಪ್ತಿಯ 26 ಹಳ್ಳಿಗಳ ರೈತರಿಗೆ ಕೇವಲ 200 ಪ್ಯಾಕೆಟ್ ಮೇವಿನ ಬೀಜಗಳನ್ನು ಉಚಿತವಾಗಿ ವಿತರಿಸಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಕುರಿತು ಮಾತನಾಡಿರುವ ಭಾರತೀಯ ಕಿಸಾನ್ ಸಂಘದ ಕಾರ್ಯದರ್ಶಿ ಕೆ.ಕೆ. ಹಟ್ಟಿಯ ಜಯಪ್ರಕಾಶ್ ಅವರು, ಯಲ್ಲದಕೆರೆ ಪಶು ಆಸ್ಪತ್ರೆ ವ್ಯಾಪ್ತಿಯಲ್ಲಿ ಸುಮಾರು 2,600 ರಾಸುಗಳಿದ್ದು, ಈ ಭಾಗದ ರೈತರಿಗೆ ಸಮರ್ಪಕವಾಗಿ ವಿತರಿಸಲು ಕನಿಷ್ಠ 1,000 ಪ್ಯಾಕೆಟ್ ಮೇವಿನ ಬೀಜಗಳ ಅಗತ್ಯವಿತ್ತು. ಆದರೆ ಇಲಾಖೆಯು ಅತ್ಯಲ್ಪ ಪ್ರಮಾಣದ ಬೀಜ ವಿತರಿಸಿ ಕೈತೊಳೆದುಕೊಂಡಿರುವುದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ಬರದ ಪರಿಸ್ಥಿತಿಯಿಂದಾಗಿ ರೈತರು ಈಗಾಗಲೇ ಸಂಕಷ್ಟದಲ್ಲಿದ್ದು, ಜಾನುವಾರುಗಳನ್ನು ಸಾಕುವುದೇ ಕಷ್ಟಕರವಾಗಿದೆ. ಆದ್ದರಿಂದ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದಲ್ಲಿ ಮೇವಿನ ಬೀಜಗಳನ್ನು ವಿತರಿಸಬೇಕು. ಜೊತೆಗೆ ಹಿರಿಯೂರು ತಾಲೂಕಿನಲ್ಲಿ ಎದುರಾಗಿರುವ ಮೇವಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕೂಡಲೇ 'ಮೇವು ಬ್ಯಾಂಕ್' ಆರಂಭಿಸಬೇಕು ಎಂದು ಅವರು ಗಂಭೀರವಾಗಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪಶು ಆಸ್ಪತ್ರೆಯ ಸಿಬ್ಬಂದಿ ಹಾಗೂ ರೈತ ಮುಖಂಡರಾದ ಮಂಜುನಾಥ್ ಬಿ.ಕೆ., ರೇವಣ್ಣ, ಕುಚಲ್ ಕುಮಾರ್, ಜೆ. ಬೈರಪ್ಪ, ಚಿಗಲಿಕಟ್ಟೆ ರಂಗನಾಥ್, ನರೇಂದ್ರ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಜ್ಞೆಯ ಜಾಗೃತಿ, ಬದುಕಿನ ಸಂಸ್ಕೃತಿ:ತಂತ್ರಜ್ಞಾನದ ಅತಿರೇಕ -ಸಾಮಾಜಿಕ ಸಾಮರಸ್ಯಕ್ಕೆ ಗಂಡಾಂತರ— ಜಾಗೃತಿ ಅಗತ್ಯಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಹಿರಿಯೂರು ತಾಲೂಕಿನಲ್ಲಿ ಮಳೆ ಅಬ್ಬರ: ಬಬ್ಬೂರು ಸಮೀಪದ ಜಮೀನಿನಲ್ಲಿ ನಿಂತ ಮಳೆ ನೀರುಸಮಾನತೆಗಾಗಿ ಸಹಭೋಜನ: ಅರಿವು ಭಾರತದಿಂದ ವಿಶಿಷ್ಟ ಚಿಂತನೆ–ರಾಹುಲ್ ಗಾಂಧಿ ವಿರುದ್ಧ ಗರ್ಭಿಣಿ ಪತ್ರಕರ್ತೆಯ ಗಂಭೀರ ಆರೋಪ: ಪೊಲೀಸ್ ಆಯುಕ್ತರಿಗೆ ಕ್ರಿಮಿನಲ್ ದೂರುಸರ್ಕಾರಿ ನೌಕರರು ಹಾಗೂ ಗುತ್ತಿಗೆ ಸಿಬ್ಬಂದಿಗೆ ರಾತ್ರಿ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶಮಹತ್ವದ ಆಡಳಿತಾತ್ಮಕ ಸುಧಾರಣೆ: ಸಕಾಲ ವ್ಯಾಪ್ತಿಗೆ ಎಲ್ಲಾ ಸರ್ಕಾರಿ ಸೇವೆಗಳು ಹಾಗೂ ಆರ್‌ಟಿಐ ಆನ್‌ಲೈನ್ ಕಡ್ಡಾಯ