Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಸೈಕ್ಲಿಂಗ್ ಟ್ರ್ಯಾಕ್​ ನಿರ್ಮಿಸುವ ಹಗಲು ಕನಸು ಕಾಣುತ್ತೀರಾ-ಸುಪ್ರೀಂ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೊಳೆಗೇರಿಯ ಎಷ್ಟೋ ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಅಂತಹ ಜನರಿಗೆ ಕಡಿಮೆ ಬೆಲೆಯಲ್ಲಿ ಮನೆ ನಿರ್ಮಿಸಲು ರಾಜ್ಯ ಸರ್ಕಾರಗಳ ಬಳಿ ಹಣವಿಲ್ಲ. ಅಂಥಹದರಲ್ಲಿ ನೀವು ಸೈಕಲ್(ಸೈಕ್ಲಿಂಗ್) ಟ್ರ್ಯಾಕ್​ಗಳನ್ನು ನಿರ್ಮಿಸುವ ಬಗ್ಗೆ ಹಗಲುಗನಸು ಕಾಣುತ್ತೀರಲ್ಲ
? ಎಂದು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನೆ ಮಾಡಿತು.

ದೇಶಾದ್ಯಂತ ಸೈಕ್ಲಿಂಗ್ ಟ್ರ್ಯಾಕ್​ಗಳನ್ನು ನಿರ್ಮಿಸಬೇಕೆಂದು ಕೋರಿ ಸೈಕ್ಲಿಂಗ್ ಪ್ರವರ್ತಕ ದವೀಂದರ್ ಸಿಂಗ್ ನಾಗಿ ಎಂಬವರು ನ್ಯಾಯಾಲಯಕ್ಕೆ ಪಿಐಎಲ್​ ಅರ್ಜಿ ಸಲ್ಲಿಸಿದ್ದು ಆ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್​ ಮೇಲಿನಂತೆ ಅರ್ಜಿದಾರರಿಗೆ ಪ್ರಶ್ನಿಸಿತು.

ದೇಶಾದ್ಯಂತ ಪ್ರತ್ಯೇಕ ಸೈಕಲ್ ಟ್ರ್ಯಾಕ್​ಗಳನ್ನು ನಿರ್ಮಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ನ್ಯಾಯಪೀಠವು, ದೇಶದ ಮುಂದಿರುವ ಆದ್ಯತೆಗಳೇನು ಎಂಬುದನ್ನು ಅರ್ಜಿದಾರರು ಸರಿಯಾಗಿ ತಿಳಿದುಕೊಳ್ಳಬೇಕಿದೆ. ಸೈಕಲ್ ಟ್ರ್ಯಾಕ್​ಗಿಂತಲೂ ಪ್ರಮುಖ ತುರ್ತು ವಿಷಯಗಳು ದೇಶದ ಮುಂದಿದ್ದು, ಅವುಗಳ ಬಗ್ಗೆ ಗಮನಹರಿಸಬೇಕಿದೆ ಎಂದು ಕೋರ್ಟ್ ತಾಕೀತು ಮಾಡಿತು.

ದೇಶಾದ್ಯಂತ ಇರುವ ಕೊಳೆಗೇರಿಗಳಲ್ಲಿ ಜನರು ಎಂಥ ಸ್ಥಿತಿಯಲ್ಲಿ ವಾಸಿ ಮಾಡುತ್ತಿದ್ದಾರೆ ಎಂಬುದನ್ನು ಅಲ್ಲಿಗೆ ಹೋಗಿ ನೋಡಿ. ಇವರಿಗೆ ಮನೆಗಳನ್ನು ನೀಡಲು ರಾಜ್ಯ ಸರ್ಕಾರಗಳಿಗೆ ಸಾಧ್ಯವಾಗುತ್ತಿಲ್ಲ. ನೀವು ಸೈಕಲ್ ಟ್ರ್ಯಾಕ್​​ಗಳ ಬಗ್ಗೆ ಹಗಲುಗನಸು ಕಾಣುತ್ತಿರುವಿರಲ್ಲ. ಜನರಿಗೆ ಮೂಲಭೂತ ಸೌಕರ್ಯಗಳು ಬೇಕಿವೆ, ಅದನ್ನು ಬಿಟ್ಟು ನೀವು ಸೈಕಲ್ ಟ್ರ್ಯಾಕ್​ಗಳ ಬಗ್ಗೆ ಮಾತನಾಡುತ್ತಿರುವಿರಿ ಎಂದು ನ್ಯಾಯಾಲಯ ಹೇಳಿತು.

ನಮ್ಮ ಆದ್ಯತೆಗಳು ತಪ್ಪಾಗುತ್ತಿವೆ. ನಾವು ನಮ್ಮ ಆದ್ಯತೆಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ. ಸಂವಿಧಾನದ ಅನುಚ್ಛೇದ 21ರ ಬಗ್ಗೆ ನಾವು ತಿಳಿಯಬೇಕಿದೆ. ಜನರಿಗೆ ಕುಡಿಯಲು ಶುದ್ಧ ನೀರು ಇಲ್ಲ. ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಅಂಥದ್ದರಲ್ಲಿ ನಿಮಗೆ ಸೈಕಲ್ ಟ್ರ್ಯಾಕ್ ಬೇಕೇ? ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಪ್ರಶ್ನಿಸಿತು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!