ಚಂದ್ರವಳ್ಳಿ ನ್ಯೂಸ್, ಪಾವಗಡ:
ತುಮಕೂರು ವಿಶ್ವವಿದ್ಯಾನಿಲಯವು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಪಾವಗಡದ ನಂದೀಶ .ಎಲ್ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ಅವರು "ಯುಟಿಲೈಸೇಷನ್ ಆಪ್ ಇನ್ಫಾರ್ಮೇಷನ್ ಗವರ್ನನ್ಸ್ ಇನ್ ದ ಲೈಬ್ರರೀಸ್ ಆಫ್ ಡೀಮ್ಡ್ ಟು ಬಿ ಯೂನಿವರ್ಸಿಟೀಸ್ ಇನ್ ಕರ್ನಾಟಕ: ಎ ಸ್ಟಡಿ" (Utilization of Information Governance in the Libraries of Deemed to be Universities in Karnataka: A Study) ಎಂಬ ಮಹಾಪ್ರಬಂಧವನ್ನು ಮಂಡಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಯು.ಜಿ.ಸಿ. ಫೆಲೋಶಿಪ್ ನೊಂದಿಗೆ ತುಮಕೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಂಶೋಧನೆ ಕೈಗೊಂಡಿದ್ದ ಇವರು, ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೇಶವ ಅವರ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.




