ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ 177 ಟಿಎಂಸಿ ಕಾವೇರಿ ನೀರು ಹರಿಸಲು ಕರ್ನಾಟಕ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮೇಕೆದಾಟು ಯೋಜನೆ ಕುರಿತ ಬಿಜೆಪಿ ಟೀಕೆಗಳಿಗೆ ತಿರುಗೇಟು ನೀಡಿದ ಅವರು, "ಅಣೆಕಟ್ಟು ಯೋಜನೆಯ ಬಗ್ಗೆ ಕನಿಷ್ಠ ಜ್ಞಾನವಿಲ್ಲದೆ ಮಾತನಾಡಬಾರದು. ಮೇಕೆದಾಟು ನಿರ್ಮಾಣದಿಂದ ಮಂಡ್ಯ, ಮೈಸೂರು, ಹಾಸನ, ಬೆಂಗಳೂರು ಮಾತ್ರವಲ್ಲದೆ ತಮಿಳುನಾಡಿಗೂ ಅನುಕೂಲವಾಗಲಿದೆ" ಎಂದು ಪ್ರತಿಪಾದಿಸಿದರು.
ಇದೇ ವೇಳೆ, ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರೊಂದಿಗಿನ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, "ನಾವೆಲ್ಲರೂ ಸ್ನೇಹಿತರು ಮತ್ತು ಭಾರತೀಯರು" ಎಂದಷ್ಟೇ ಹೇಳಿ, ಈ ಭೇಟಿಯ ಬಗ್ಗೆ ಹೆಚ್ಚಿನ ಚರ್ಚೆಗೆ ನಿರಾಕರಿಸಿದರು.




