Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ‘ಲುಕ್ ಔಟ್ ಸರ್ಕ್ಯುಲರ್’ ಹೊರಡಿಸಲು ಹೈಕೋರ್ಟ್ ನಿರ್ದೇಶನ

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ವರದಕ್ಷಿಣೆ ಕಿರುಕುಳ ಹಾಗೂ ಕ್ರೌರ್ಯ ಎಸಗಿರುವ ಪತಿ ತನಿಖೆಗೆ ಹಾಜರಾಗದೇ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿದೆ ಎಂಬ ಪತ್ನಿಯ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್
, ಆಕೆಯ ಪತಿಯ ವಿರುದ್ಧ ‘ಲುಕ್ ಔಟ್ ಸರ್ಕ್ಯುಲರ್’ ಹೊರಡಿಸುವಂತೆ ಪೊಲೀಸರಿಗೆ ಸೂಚಿಸಿದೆ.

‘ಲುಕ್ ಔಟ್ ಸರ್ಕ್ಯುಲರ್’ ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತರಾಮನಾಥ್‌ಹೆಗಡೆ ಅವರಿದ್ದ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.

ಪ್ರಕರಣದ ಪ್ರತಿವಾದಿಗಳಾದ ರಾಜ್ಯ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಪೀಠ, ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ.

ನ್ಯಾಯಪೀಠದ ಅಭಿಪ್ರಾಯ: “ಈ ಪ್ರಕರಣವು ಕೇವಲ ಸಾಲ ವಸೂಲಾತಿಗೆ ಸಂಬಂಧಿಸಿದ್ದಲ್ಲ, ಬದಲಿಗೆ ಪತಿಯ ವಿರುದ್ಧ ಗಂಭೀರ ಸ್ವರೂಪದ ಕ್ರಿಮಿನಲ್ ಅಪರಾಧ ಆರೋಪಗಳಿವೆ. ಪತಿಯು ದೇಶ ಬಿಟ್ಟು ಪರಾರಿಯಾಗುವ ಸಾಧ್ಯತೆ ಇರುವುದರಿಂದ ತನಿಖೆಗೆ ಹಾಜರಾಗದೆ ಇರಬಹುದು. ಆದ್ದರಿಂದ ಲುಕ್ಔಟ್ ಸರ್ಕ್ಯುಲರ್ ಜಾರಿಗೊಳಿಸುವುದು ಅನಿವಾರ್ಯವಿದೆ. ಒಂದು ವೇಳೆ ಈ ಆದೇಶದಿಂದ ಪತಿಗೆ ತೊಂದರೆಯಾಗಿದ್ದಲ್ಲಿ, ಅವರು ಕಾನೂನುಬದ್ಧವಾಗಿ ಈ ಅರ್ಜಿಯಲ್ಲಿ ಪಾಲ್ಗೊಂಡು ತಮ್ಮ ವಾದ ಮಂಡಿಸಲು ಅವಕಾಶವಿರುತ್ತದೆ” ಎಂದು ಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಪತಿ–ಪತ್ನಿ ನಡುವಿನ ಮನಸ್ತಾಪದ ಹಿನ್ನೆಲೆಯಲ್ಲಿ, ಪತಿಯ ವಿರುದ್ಧ ದೈಹಿಕ, ಮಾನಸಿಕ, ಆರ್ಥಿಕ ಕ್ರೌರ್ಯ ಹಾಗೂ ಕಾನೂನುಬಾಹಿರ ವರದಕ್ಷಿಣೆ ಬೇಡಿಕೆಗಳ ಆರೋಪದಡಿ 2026ರ ಸೆಪ್ಟೆಂಬರ್ 30ರಂದು ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರನ್ನಾಧರಿಸಿ ಪೊಲೀಸರು ಭಾರತೀಯ ನ್ಯಾಯ ಸಂಹಿತಾ–2023ರ (BNS) ಕಲಂ 85, 352 ಮತ್ತು 351(2) ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆ–1961ರ ಕಲಂ 3 ಮತ್ತು 4ರ ಅಡಿಯಲ್ಲಿ ಪತಿ ಹಾಗೂ ಅತ್ತೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

“ನನ್ನ ಪತಿ ಕಳೆದ ಮೂರು ವರ್ಷಗಳಿಂದ ಫ್ರಾನ್ಸ್‌ನಲ್ಲಿ ಉದ್ಯೋಗದಲ್ಲಿದ್ದು, ದೀರ್ಘಕಾಲದ ಫ್ರೆಂಚ್ ನಿವಾಸದ ಪರವಾನಗಿಯನ್ನೂ ಹೊಂದಿದ್ದಾರೆ. ಸದ್ಯ ಭಾರತದಲ್ಲಿರುವ ಅವರು, ನಾನು ಎಫ್‌ಐಆರ್ ದಾಖಲಿಸುತ್ತಿದ್ದಂತೆಯೇ ತನಿಖೆಗೆ ಸಹಕರಿಸದೆ ತಪ್ಪಿಸಿಕೊಂಡು ಫ್ರಾನ್ಸ್‌ಗೆ ಪಲಾಯನ ಮಾಡಲು ಹೊಂಚು ಹಾಕುತ್ತಿದ್ದಾರೆ. ಆದ್ದರಿಂದ ಅವರು ದೇಶ ಬಿಟ್ಟು ತೆರಳದಂತೆ ತಡೆಯಲು ಎಲ್‌ಒಸಿ ಜಾರಿಗೊಳಿಸಬೇಕು” ಎಂದು ಪತ್ನಿ ಕೋರಿದ್ದರು. ಆದರೆ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿದ್ದರಿಂದ ಅವರು ಹೈಕೋರ್ಟ್‌ನ ಮೆಟ್ಟಿಲೇರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಂತ್ರಜ್ಞಾನದ ಅತಿರೇಕ -ಸಾಮಾಜಿಕ ಸಾಮರಸ್ಯಕ್ಕೆ ಗಂಡಾಂತರ— ಜಾಗೃತಿ ಅಗತ್ಯಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಹಿರಿಯೂರು ತಾಲೂಕಿನಲ್ಲಿ ಮಳೆ ಅಬ್ಬರ: ಬಬ್ಬೂರು ಸಮೀಪದ ಜಮೀನಿನಲ್ಲಿ ನಿಂತ ಮಳೆ ನೀರುಸಮಾನತೆಗಾಗಿ ಸಹಭೋಜನ: ಅರಿವು ಭಾರತದಿಂದ ವಿಶಿಷ್ಟ ಚಿಂತನೆ–ರಾಹುಲ್ ಗಾಂಧಿ ವಿರುದ್ಧ ಗರ್ಭಿಣಿ ಪತ್ರಕರ್ತೆಯ ಗಂಭೀರ ಆರೋಪ: ಪೊಲೀಸ್ ಆಯುಕ್ತರಿಗೆ ಕ್ರಿಮಿನಲ್ ದೂರುಸರ್ಕಾರಿ ನೌಕರರು ಹಾಗೂ ಗುತ್ತಿಗೆ ಸಿಬ್ಬಂದಿಗೆ ರಾತ್ರಿ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶಮಹತ್ವದ ಆಡಳಿತಾತ್ಮಕ ಸುಧಾರಣೆ: ಸಕಾಲ ವ್ಯಾಪ್ತಿಗೆ ಎಲ್ಲಾ ಸರ್ಕಾರಿ ಸೇವೆಗಳು ಹಾಗೂ ಆರ್‌ಟಿಐ ಆನ್‌ಲೈನ್ ಕಡ್ಡಾಯನೈಸ್ ರಸ್ತೆಯಲ್ಲಿ ಕೆಮಿಕಲ್ ಟ್ಯಾಂಕರ್ ಸ್ಫೋಟ: ಮುಗಿಲು ಮುಟ್ಟಿದ ದಟ್ಟ ಕಪ್ಪು ಹೊಗೆ, ಟ್ರಾಫಿಕ್ ಜಾಮ್!