ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಹಾಗೂ ಕಾರ್ಗಿಲ್ ಯುದ್ಧದಲ್ಲಿ ಸ್ಮರಣೀಯ ಸೇವೆ ಸಲ್ಲಿಸಿದ ಹುತಾತ್ಮ ಯೋಧನ ಪತ್ನಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಯವರು ಆದೇಶ ಹೊರಡಿಸಿದ್ದಾರೆ.
ರಾಜ್ಯದ ಇತಿಹಾಸದಲ್ಲಿ ಈ ಉನ್ನತ ಹುದ್ದೆ ಅಲಂಕರಿಸುತ್ತಿರುವ ಎರಡನೇ ಮಹಿಳೆ ಎಂಬ ಹೆಗ್ಗಳಿಗೆ ಇವರದ್ದು. ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಅನುಭವ, ದಕ್ಷ ಆಡಳಿತ ಹಾಗೂ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಡಾ. ಸುಧಾ ಯಾದವ್ ಅವರ ಆಗಮನವು ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ, ಸಂವಿಧಾನಿಕ ಮೌಲ್ಯಗಳ ರಕ್ಷಣೆ ಮತ್ತು ಜನಕಲ್ಯಾಣದ ಆಶಯಗಳಿಗೆ ಮತ್ತಷ್ಟು ಬಲತುಂಬಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.



