E-PAPER
14 Nov 2026, 07:34:07 AM|
Gold₹13793/gGold24K ₹13,793/g - 22K ₹12,633/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Bangalore Rural

ಗೂಳ್ಯ ರಸ್ತೆ ಡಾಂಬರಿಕರಣಕ್ಕೆ ಚಾಲನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಗೂಳ್ಯ ಗ್ರಾಮದ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದೆ. ಗೂಳ್ಯ ಮುಖ್ಯ ರಸ್ತೆಯಿಂದ ಗ್ರಾಮದ ಹನುಮಂತಪ್ಪ ಅವರ ಮನೆಯವರೆಗೆ ಸುಮಾರು ಅರ್ಧ ಕಿಲೋಮೀಟರ್ ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಸುಮಾರು 30 ಲಕ್ಷ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದ್ದ ಈ ರಸ್ತೆ ನಂದಿಬೆಟ್ಟ ಕ್ರಾಸ್ ಹಾಗೂ ಲಿಂಗನಹಳ್ಳಿ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ.

ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ, ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಡಾಂಬರೀಕರಣಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಸೂಚನೆಯಂತೆ ಇಂದು ಗುದ್ದಲಿ ಪೂಜೆ ಮಾಡಲಾಗಿದೆ. ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.

ರಸ್ತೆ ಹದಗೆಟ್ಟಿರುವುದನ್ನು ಗಮನಿಸಿದ್ದ ಸಚಿವರು ಕೂಡಲೇ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಕೊಟ್ಟ ಮಾತಿನಂತೆ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ತೂಬಗೆರೆ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೊರತೆಯಿಲ್ಲ. ಸಚಿವ ಕೆ.ಎಚ್.ಮುನಿಯಪ್ಪ ಅವರು ಈ ಭಾಗದ ಶಾಸಕರಾಗಿ ದೊರೆತಿರುವುದು ನಮ್ಮೆಲ್ಲರ ಪುಣ್ಯ. ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಮೂಲಕ ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜ್ ಮಾತನಾಡಿ, ಸಚಿವರ ಸಹಕಾರದಿಂದ ತೂಬಗೆರೆ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಬಿಜೆಪಿ ಮತ್ತು ಜೆಡಿಎಸ್‌ಗೆ ಅಂತಹ ಇತಿಹಾಸವಿಲ್ಲ. ಮುಂದಿನ ದಿನಗಳಲ್ಲಿ ಸಾಲುಸಾಲು ಚುನಾವಣೆಗಳು ಎದುರಾಗಲಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಎಸ್.ಡಿ.ಮುನಿರಾಜ್ ಮಾತನಾಡಿ, ಗೂಳ್ಯ ಗ್ರಾಮದಲ್ಲಿ ಹಲವು ವರ್ಷಗಳಿಂದ ರಸ್ತೆ ಹದಗೆಟ್ಟಿತ್ತು. ಸಚಿವ ಕೆ.ಎಚ್.ಮುನಿಯಪ್ಪ ಅವರ ಶಾಸಕರ ಅನುದಾನದಲ್ಲಿ ಇದೀಗ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದೆ. ಹಳ್ಳಿಗಳು ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ಸಚಿವರು ತೂಬಗೆರೆ ಹೋಬಳಿಯ ಗ್ರಾಮಗಳಿಗೆ ರಸ್ತೆ ದುರಸ್ತಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸಚಿವರು ಸೂಚನೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಕಾಂಗ್ರೆಸ್ ಮುಖಂಡ ಅರವಿಂದ್, ಎಸ್‌ಟಿ ಸಮುದಾಯದ ಅಧ್ಯಕ್ಷ ಮುನಿಕೃಷ್ಣಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಶ್ರೀಧರ್, ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ ರಂಗಪ್ಪ, ದೊಡ್ಡಬಳ್ಳಾಪುರ ತಾಲೂಕು ಎಸ್ ಟಿ ಸಮುದಾಯದ ಅಧ್ಯಕ್ಷ ಮುನಿಕೃಷ್ಣಪ್ಪ, ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಮೇಶ್, ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ, ಹನುಮಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮುರುಳಿ ಜಿ, ದೇವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರ ಸ್ವಾಭಿಮಾನ ಒಗ್ಗಟ್ಟಿನ ಸಂಕೇತ: ತ. ನ ಪ್ರಭುದೇವ್ಡಾ. ವೆಂಕಟರೆಡ್ಡಿ ಪ್ರಶಸ್ತಿ ಪುರಸ್ಕೃತ ಮಹಾಬಲೇಶ್ವರ್ ರವರಿಗೆ ಕರವೇ ಅಭಿನಂದನೆಗೂಳ್ಯ ರಸ್ತೆ ಡಾಂಬರಿಕರಣಕ್ಕೆ ಚಾಲನೆಕರ್ನಾಟಕಕ್ಕೆ 15,600 ಕೋಟಿ ಅಭಿವೃದ್ಧಿ ಕೊಡುಗೆ: ಪ್ರಧಾನಿ ಮೋದಿರಾಜ್ಯದ ಪ್ರಗತಿ ಮತ್ತು ಮೆಟ್ರೋ ವಿಸ್ತರಣೆಗೆ ಪ್ರಧಾನಿ ಮೋದಿ ಸಹಕಾರ ಕೋರಿದ ಸಿಎಂ ಡಿ.ಕೆ. ಶಿವಕುಮಾರ್ಬರ ಪರಿಹಾರ, ಕಬ್ಬು ಬೆಳೆಗಾರರ ನೆರವು ಮತ್ತು ಮೆಟ್ರೋ ಯೋಜನೆಗಳಿಗೆ ಅನುದಾನಕ್ಕಾಗಿ ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿಪಿಂಕ್ ಲೈನ್ ಮೆಟ್ರೋಗೆ ಚಾಲನೆ, ಎಸ್-ವ್ಯಾಸ ಸುವರ್ಣ ಮಹೋತ್ಸವದಲ್ಲಿ ಭಾಗಿಯಾದ ಪ್ರಧಾನಿ ಮೋದಿಮೆಟ್ರೋ ಪಿಂಕ್ ಲೈನ್, ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ವೇದಿಕೆಯಲ್ಲೇ ಬರ ಪರಿಹಾರಕ್ಕೆ ಸಿಎಂ ಮನವಿದೇಶದ ಮೊದಲ ಎಲ್‌ಇಡಿ ಪ್ಲಾನೆಟೇರಿಯಂ ಉದ್ಘಾಟಿಸಿದ ಪ್ರಧಾನಿ ಮೋದಿ; ಅಭಿವೃದ್ಧಿಗೆ ಹೊಸ ವೇಗದ ಭರವಸೆಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ; ಪತ್ನಿಯ ಕಣ್ಣೆದುರೇ ಅಟ್ಟಹಾಸ