Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಡಿಕೆ, ತೆಂಗು ಬೆಳೆಗಳಲ್ಲಿ ಬರ ನಿರ್ವಹಣೆ: ರೈತರಿಗೆ ಪ್ರಾಯೋಗಿಕ ತರಬೇತಿ

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹವಾಮಾನ ವೈಪರೀತ್ಯ ಹಾಗೂ ನೀರಿನ ಅಭಾವದ ಹಿನ್ನೆಲೆಯಲ್ಲಿ ಅಡಿಕೆ ಮತ್ತು ತೆಂಗಿನ ತೋಟಗಳನ್ನು ಉಳಿಸಿಕೊಳ್ಳುವ ಹಾಗೂ ತೇವಾಂಶ ಸಂರಕ್ಷಣೆ ಮಾಡುವ ಕುರಿತು ತೋಟಗಾರಿಕೆ ಇಲಾಖೆ ವತಿಯಿಂದ ಸೋಮವಾರ ಚಿತ್ರದುರ್ಗ ತಾಲೂಕಿನ ಕಸಬಾ ಹೋಬಳಿಯ ಜಾನಕೊಂಡ ಮತ್ತು ಜೆ.ಎನ್. ಕೋಟೆ ಗ್ರಾಮಗಳಲ್ಲಿ ಕ್ಷೇತ್ರ ತರಬೇತಿ ಕಾರ್ಯಕ್ರಮ ನಡೆಯಿತು.

ಎಲ್ ನಿನೋ ಪರಿಣಾಮದಿಂದಾಗಿ ಮಳೆ ಅಭಾವ ಎದುರಾಗಿದ್ದು, ಜಿಲ್ಲೆಯಲ್ಲಿ ತೀವ್ರ ಉಷ್ಣಾಂಶ ಹೆಚ್ಚಿ ನೀರಿನ ಕೊರತೆ ಉಂಟಾಗಿದೆ. ಇದರಿಂದ ಅಡಿಕೆ ಮತ್ತು ತೆಂಗು ಬೆಳೆಗಳ ಬೆಳವಣಿಗೆ ಕುಂಠಿತಗೊಂಡು, ರೈತರ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಲಭ್ಯವಿರುವ ನೀರನ್ನು ವೈಜ್ಞಾನಿಕವಾಗಿ ಬಳಸಿ, ತೇವಾಂಶ ಕಾಪಾಡಿಕೊಳ್ಳುವ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ಪ್ರಾಯೋಗಿಕವಾಗಿ ವಿವರಿಸಲಾಯಿತು.

ತೆಂಗು ಮತ್ತು ಅಡಿಕೆ ಗಿಡಗಳ ಬುಡದಲ್ಲಿ ಸಿಪ್ಪೆಗಳನ್ನು ಹೂಳುವುದು, ಒಣ ಎಲೆಗಳು ಹಾಗೂ ಹಸಿರು ಗೊಬ್ಬರದ ಎಲೆಗಳಿಂದ ಮಲ್ಚಿಂಗ್ (ಹೊದಿಕೆ) ಮಾಡುವುದು, ಕೊಟ್ಟಿಗೆ ಗೊಬ್ಬರ ಅಥವಾ ಕಾಂಪೋಸ್ಟ್ ಮಾಡಿದ ಕಾಯರ್ ಪಿಥ್' ಮಣ್ಣಿನಲ್ಲಿ ಸೇರಿಸುವುದು ಮತ್ತು ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ನೀರಿನಲ್ಲಿ ಕರಗುವ ಪೋಷಕಾಂಶಗಳನ್ನು ಒದಗಿಸುವುದರಿಂದ ಬರದ ಪರಿಣಾಮವನ್ನು ಕಡಿಮೆ ಮಾಡಬಹುದು ಎಂದು ತಿಳಿಸಲಾಯಿತು.

ತರಬೇತುದಾರರಾಗಿ ಭಾಗವಹಿಸಿದ್ದ ಹಿರಿಯೂರು ತಾಲೂಕು ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಓಂಕಾರಪ್ಪ ಮಾತನಾಡಿ, ಬರದ ಸಮಯದಲ್ಲಿ ಅಡಿಕೆ ಮತ್ತು ತೆಂಗು ಬೆಳೆಗಳಲ್ಲಿ ಕಂಡುಬರುವ ಕೀಟ ಹಾಗೂ ರೋಗ ಬಾಧೆಗಳು ಮತ್ತು ಅವುಗಳ ಹತೋಟಿ ಕ್ರಮಗಳ ಬಗ್ಗೆ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಡಾ. ದೇವರಾಜು,  ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಸುರೇಶ್, ವೆಂಕಟೇಶ್ ನಾಯ್ಕ್, ಜಾನಕೊಂಡ ಗ್ರಾಮದ ಪ್ರಗತಿಪರ ರೈತರಾದ ಅಶೋಕ, ಮಹಾಲಿಂಗಪ್ಪ, ಆನಂದಪ್ಪ, ಶಿವಲಿಂಗಪ್ಪ, ಸುರೇಶ ಹಾಗೂ ಜೆ.ಎನ್. ಕೋಟೆ ಗ್ರಾಮದ ರೈತರಾದ ಮಂಜುನಾಥ, ಸುರೇಶ, ರುದ್ರಮುನಿಯಪ್ಪ, ನಿಂಗಪ್ಪ, ಪ್ರಸನ್ನಕುಮಾರ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಲವಾರು ರೈತರು ಭಾಗವಹಿಸಿ ತಮ್ಮ ಶಂಕೆಗಳನ್ನು ಪರಿಹರಿಸಿಕೊಂಡರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!