Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಮತದಾರರ ಕರಡು ಪಟ್ಟಿ ಪ್ರಕಟಣೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿ ಚುನಾವಣೆಯನ್ನು ಘೋಷಣೆ ಮಾಡಲಾಗಿದ್ದು, ಚಿತ್ರದುರ್ಗ ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅರ್ಹ ಮತದಾರರ ಕರಡು ಪಟ್ಟಿ ಪ್ರಕಟಣೆ ಮಾಡಲಾಗಿದೆ.


ಜಿಲ್ಲಾ ಕಾರ್ಯನಿರತ  ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಓ.ಪರಮೇಶ್ವರಪ್ಪ  ಅವರು ಅರ್ಹ ಮತದಾರರ ಪಟ್ಟಿಯನ್ನು ಪತ್ರಕರ್ತರ ಸಮ್ಮುಖದಲ್ಲಿ ಪ್ರಚುರ ಪಡಿಸಿರುತ್ತಾರೆ.

ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿಗೆ ಚುನಾವಣೆ ಘೋಷಣೆ ಮಾಡಿ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಚುನಾವಣಾ ಕಚೇರಿಯು ನಗರದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.


ಅಕ್ಟೋಬರ್ 13ರಂದು ಮತದಾರರ ಕರಡು ಪಟ್ಟಿ ಪ್ರಕಟಣೆ ಮಾಡಲಾಗಿದ್ದು, ಅ.16 ರವರೆಗೆ ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅ.18 ಮತದಾರರ ಅಂತಿಮ ಪಟ್ಟಿ ಪ್ರಕಟಣೆ ಮಾಡಲಾಗುವುದು. ಅ.19 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.30 ನಾಮಪತ್ರಗಳ ಹಿಂಪಡೆಯಲು ಕೊನೆಯ ದಿನ. ಅಂದೇ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ.

ನವೆಂಬರ್ 09 ರಂದು ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ಅಗತ್ಯ ಬಿದ್ದಲ್ಲಿ ಮತದಾನ ನಡೆಯಲಿದೆ. ನ.09 ರಂದು ಭಾನುವಾರ ಮಧ್ಯಾಹ್ನ 3.30ರ ನಂತರ ಮತಗಳ ಎಣಿಕೆ ನಡೆಯಲಿದ್ದು, ಬಳಿಕ ಫಲಿತಾಂಶ ಪ್ರಕಟವಾಗಲಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20, 21 ಹಾಗೂ 22ರಂದು ರಜೆ ಇರುತ್ತದೆ.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಅವಧಿಯ ರಾಜ್ಯ ಸಂಘದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯು ನವೆಂಬರ್ 09ರಂದು ಭಾನುವಾರ ರಾಜ್ಯ ಸಂಘದ ಕಚೇರಿ ಹಾಗೂ ಜಿಲ್ಲಾ ಘಟಕದ ಕಚೇರಿಯಲ್ಲಿ ಏಕಕಾಲಕ್ಕೆ ನಡೆಯಲಿದೆ.

ಜಿಲ್ಲಾ ಘಟಕಗಳಿಗೂ ರಾಜ್ಯ ಸಂಘದ ಚುನಾವಣೆ ಜೊತೆಯಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಕಾರ್ಯನಿರತ  ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಓ.ಪರಮೇಶ್ವರಪ್ಪ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!