Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಬಾಲಗಂಗಾಧರನಾಥ ಸ್ವಾಮೀಜಿ ದತ್ತಿ ನಿದಿ ಪ್ರಶಸ್ತಿ ಸ್ಥಾಪನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ದತ್ತಿ ನಿಧಿ ಪ್ರಶಸ್ತಿ ಸ್ಥಾಪಿಸಲು ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದಾಗಿದ್ದಾರೆ.


ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಲು ಆದಿಚುಂಚನಗಿರಿ ಮಠಕ್ಕೆ ಹೋಗಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ಜೊತೆಗೆ ಈ ನಿಟ್ಟಿನಲ್ಲಿ ಚರ್ಚೆ ನಡೆಸಿ ತಮ್ಮ ಇಚ್ಛೆ ವ್ಯಕ್ತಪಡಿಸಿದ್ದರು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ನೆನಪಿನಲ್ಲಿ ಚುಂಚಶ್ರೀ ಪ್ರಶಸ್ತಿ ಸ್ಥಾಪಿಸಲು 10 ಲಕ್ಷ ರೂ ಠೇವಣಿ ಇಡುವುದಾಗಿ ತಿಳಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸ್ವಾಗತಿಸುತ್ತದೆ.

ಡಾ.ನಿರ್ಮಲಾನಂದನಾಥ‌ಸ್ವಾಮೀಜಿ ಅವರ ಆಶಯದಂತೆ ಠೇವಣಿ ಇಟ್ಟ ಬಳಿಕ ಪ್ರತಿ ವರ್ಷವೂ ಸಮ್ಮೇಳನದಲ್ಲಿ ಸಾಧಕ ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST