Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರತಿಯೊಬ್ಬ ಮಗುವಿನಲ್ಲೂ ತನ್ನದೇ ಆದ ವಿಶಿಷ್ಟ ಪ್ರತಿಭೆ ಇರುತ್ತದೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರತಿಯೊಬ್ಬ ಮಗುವಿನಲ್ಲೂ ತನ್ನದೇ ಆದ ವಿಶಿಷ್ಟ ಪ್ರತಿಭೆ ಇರುತ್ತದೆ. ಅಂಕಗಳ ವಿಷಯದಲ್ಲಿ ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯ ಅಥವಾ ಇತರ ಮಕ್ಕಳೊಂದಿಗೆ ಹೋಲಿಸಿ ಅನಗತ್ಯ ಒತ್ತಡ ಹೇರಬಾರದು ಎಂದು ಮೊಳಕಾಲ್ಮೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಹನುಮಂತಪ್ಪ ಸಲಹೆ ನೀಡಿದರು.

ಚಂದ್ರವಳ್ಳಿ ಸ್ಪೂರ್ತಿ ವಾಕರ್ಸ್ ಕ್ಲಬ್‌ನಿಂದ ಚಿತ್ರದುರ್ಗದ ಐಶ್ವರ್ಯ ಫೋರ್ಟ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕ್ಲಬ್ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ತರಗತಿಯಲ್ಲಿ ಇತರ ವಿದ್ಯಾರ್ಥಿಗಳನ್ನು ನೋಡಿ ಸ್ವಯಂ ಪ್ರೇರಿತರಾಗಿ, ಸ್ವಾಭಿಮಾನದಿಂದ ಕಲಿಯುವ ಮನೋಭಾವ ಬೆಳೆಸಿಕೊಳ್ಳುತ್ತಾರೆ ಎಂದರು.

Advertisement

ಮನುಷ್ಯನಿಗೆ ದೇವರು ನೀಡಿರುವ ಬುದ್ಧಿಶಕ್ತಿಯನ್ನು ಸಮಯ ಹಾಗೂ ಸನ್ನಿವೇಶಕ್ಕೆ ತಕ್ಕಂತೆ ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ವ್ಯಕ್ತಿಗೆ ಒಳ್ಳೆಯದನ್ನು ಬಯಸಲು ಸಾಧ್ಯವಾಗದಿದ್ದರೂ ಪರವಾಗಿಲ್ಲ, ಆದರೆ ಕೆಟ್ಟದ್ದನ್ನು ಬಯಸದಿರುವುದೇ ದೊಡ್ಡ ಪುಣ್ಯದ ಕೆಲಸ ಎಂದು ಹೇಳಿದರು.

ನಾಲ್ಕೈದು ಮಂದಿಯಿಂದ ಆರಂಭಗೊಂಡ ಈ ಕ್ಲಬ್‌ನಲ್ಲಿ ಇಂದು ೩೫ ರಿಂದ ೪೦ ಮಂದಿ ಸಕ್ರಿಯ ಸದಸ್ಯರಿದ್ದಾರೆ. ಇಲ್ಲಿನ ಸದಸ್ಯರು ತಮ್ಮ ಆರೋಗ್ಯ ಹಾಗೂ ಪರಿಸರದ ಸ್ವಚ್ಛತೆ ಕಾಯ್ದುಕೊಳ್ಳುವುದರ ಜತೆಗೆ ಉತ್ಸಾಹದಿಂದ ನಾನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ ಎಂದರು.

ಈ ಸಂದರ್ಭದಲ್ಲಿ ಚಂದ್ರವಳ್ಳಿ ಸ್ಪೂರ್ತಿ ವಾಕರ್ಸ್ ಕ್ಲಬ್ ಸದಸ್ಯರ ಮಕ್ಕಳ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಲಬ್‌ನ ಗೌರವಾಧ್ಯಕ್ಷ ಪಿ.ಎನ್.ಕೋಟೇಶ್ವರ ಗುಪ್ತ, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಲವ, ಉಪಾಧ್ಯಕ್ಷ ಎಂ.ಎಸ್.ಆನಂದಕುಮಾರ್, ಸಹ ಕಾರ್ಯದರ್ಶಿ ಟಿ.ಎನ್.ಶ್ರೀನಿವಾಸ್, ವಿಶೇಷ ಆಹ್ವಾನಿತರಾಗಿ ನಿವೃತ್ತ ಶಿಕ್ಷಕಿ ವಿಜಯಮ್ಮ, ಪತ್ರಕರ್ತ ರವಿ ಉಗ್ರಾಣ, ಮತ್ತಿತರರು ಉಪಸ್ಥಿತರಿದ್ದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ