Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸರ್ಕಾರದ 'ಮಹಾಸಂಕಲ್ಪ', 'ನವಸಂಕಲ್ಪ' ಯೋಜನೆಗಳ ವಿವರಣೆ ನೀಡಿದ ಡಿ.ಕೆ. ಶಿವಕುಮಾರ್ 

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸುವ ಬೃಹತ್ ಗುರಿಯೊಂದಿಗೆ ರಾಜ್ಯ ಸರ್ಕಾರ 'ಮಹಾಸಂಕಲ್ಪ' ಮತ್ತು 'ನವಸಂಕಲ್ಪ' ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

​ಬಡತನ ಹಾಗೂ ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು ಮತ್ತು ಅಪೌಷ್ಟಿಕತೆಯನ್ನು ಶೇ. 5ಕ್ಕಿಂತ ಕಡಿಮೆ ಮಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಮೇಕೆದಾಟು-ಎತ್ತಿನಹೊಳೆಯಂತಹ ಮಹತ್ವಾಕಾಂಕ್ಷಿ ಜಲ ಭದ್ರತಾ ಯೋಜನೆಗಳಿಗೆ ವೇಗ ನೀಡಲಾಗಿದೆ.

Advertisement

​​ಬಂಡವಾಳ ಮತ್ತು ಹೂಡಿಕೆ: ಮುಂಬರುವ 500 ದಿನಗಳಲ್ಲಿ ಮೂಲಸೌಕರ್ಯ ವೃದ್ಧಿಗಾಗಿ ₹1.5 ಲಕ್ಷ ಕೋಟಿ ಹೂಡಿಕೆ ಹಾಗೂ ₹3 ಲಕ್ಷ ಕೋಟಿ ನೂತನ ಬಂಡವಾಳ ಆಕರ್ಷಿಸುವ ಗುರಿ.

​ನಗರಾಭಿವೃದ್ಧಿ ಮತ್ತು ಪರಿಸರ: 5 ಹೊಸ ಮಹಾನಗರಗಳ ನಿರ್ಮಾಣ, ಬೆಂಗಳೂರಿನಲ್ಲಿ 5 ನೂತನ 'ಲಾಲ್‌ಬಾಗ್' ಮಾದರಿಯ ಉದ್ಯಾನವನಗಳ ಅಭಿವೃದ್ಧಿ ಹಾಗೂ 7 ಪ್ರಮುಖ ಕೆರೆಗಳ ಪುನರುಜ್ಜೀವನ.

​ಉದ್ಯೋಗ ಮತ್ತು ವಸತಿ: 1 ಲಕ್ಷ ಸರ್ಕಾರಿ ಹಾಗೂ 5 ಲಕ್ಷ ಖಾಸಗಿ ವಲಯದ ಉದ್ಯೋಗ ಸೃಷ್ಟಿ, ಜೊತೆಗೆ ನಿರಾಶ್ರಿತರಿಗೆ 5 ಲಕ್ಷ ನಿವೇಶನಗಳ ಹಂಚಿಕೆ.

​ಕರ್ನಾಟಕವನ್ನು ಆರ್ಥಿಕವಾಗಿ ಸಬಲ, ಸಾಮಾಜಿಕವಾಗಿ ಸಮಾನ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಮಾದರಿ ರಾಜ್ಯವನ್ನಾಗಿ ಬೆಳೆಸುವ ನಿಟ್ಟಿನಲ್ಲಿ ಈ ಯೋಜನೆಗಳು ದೃಢ ಹೆಜ್ಜೆಯಾಗಲಿವೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಭಟನೆ ಹತ್ತಿಕ್ಕುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವಿಜಯನಗರದ ಮಹಾನವಮಿ; ಸಾಮ್ರಾಜ್ಯದ ವೈಭವದಿಂದ ಶ್ರೀರಂಗಪಟ್ಟಣ ದಸರಾವರೆಗೆ:ಮೂರ್ಖನಾದ ಮಹಾರಾಜನ್ : ವೆಂಕಟೇಶ್, ಚಿತ್ರದುರ್ಗಚಳ್ಳಕೆರೆಯಲ್ಲಿ ಇಂದು 'ಮಾತೃಶ್ರೀ ಪ್ರಸಾದ ನಿಲಯ' ಉದ್ಘಾಟನೆಕಾಶಿಯಲ್ಲಿ ವಿಶ್ವ ಕನ್ನಡ ಕಲಾ ಸಂಸ್ಥೆಯ ಸಾಂಸ್ಕೃತಿಕ ಸಂಭ್ರಮ: 30 ಪ್ರವಾಸಿಗರಿಗೆ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನವಿಜೃಂಭಣೆಯ 'ರೈತ ಸ್ವಾಭಿಮಾನ ಯಾತ್ರೆ': ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಾದಯಾತ್ರೆ ನಡೆಸಿದ ನಿಖಿಲ್ಕವಿತೆ ಬರೆಯುವುದು, ಸಾಹಿತಿಯಾಗುವುದು ಲೋಕದ ಜವಾಬ್ದಾರಿ: ಸಾಹಿತಿ ಬಂಜಗೆರೆ ಜಯಪ್ರಕಾಶ್ತುಮಕೂರು ದಸರಾ ಮಹೋತ್ಸವಕ್ಕೆ ಸಿದ್ಧಗಂಗಾ ಶ್ರೀ ಚಾಲನೆ: 5 ಸಾವಿರಕ್ಕೂ ಅಧಿಕ ಕಲಾವಿದರಿಂದ ಕಲಾ ಪ್ರದರ್ಶನಬಿಜೆಪಿ ಕೋರ್ ಕಮಿಟಿ ಸಭೆ: ಹಿರಿಯೂರು ಉಪಚುನಾವಣೆಗೆ ಕಮಲ ಪಕ್ಷದ ಕಸರತ್ತುಐಐಟಿ ಮದ್ರಾಸ್‌ನ ಶ್ರೀ ಜಲಕಂಠೇಶ್ವರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ