ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಹ ಸಾಧಕ ಕ್ರೀಡಾಪಟು ವಿದ್ಯಾರ್ಥಿಗಳಿಂದ ಶೈಕ್ಷಣಿಕೆ ಶುಲ್ಕ ಮರುಪಾವತಿ ಹಾಗೂ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅಧಿಕೃತ ಜಾಲತಾಣ https://sevasindhu.karnatka.gov.in ಮೂಲಕ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ದಿನಾಂಕವನ್ನು ಜುಲೈ 31 ರಿಂದ ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದೆ, ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



