Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸರ್ಕಾರಿ ಆಸ್ಪತ್ರೆಯಲ್ಲಿ ವರ್ಗಾವಣೆಯಾದ ನೌಕರರಿಗೆ ಬೀಳ್ಕೊಡುಗೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಬೇರೆಡೆಗೆ ವರ್ಗಾವಣೆ ಗೊಂಡ ಮುಖ್ಯ ವೈದ್ಯಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಆಸ್ಪತ್ರೆ ಮುಖ್ಯ ವೈದ್ಯಧಿಕಾರಿಗಳಾದ ಡಾ. ರಮೇಶ್, ಎಲ್. ಶ್ರೀನಿವಾಸ್ ಮೂರ್ತಿ (R. T. A.), ಬಿ. ಎಲ್. ಪ್ರದೀಪ್ (ಆಡಳಿತಧಿಕಾರಿ ), ಆರ್. ಶ್ರೀನಿವಾಸ್ ಮೂರ್ತಿ ಹಾಗೂ ಮಂಜುನಾಥ್ (ಫಾರ್ಮಸಿ )ರವರು ಬೇರೆಡೆಗೆ ವರ್ಗಾವಣೆ ಯಾಗಿದ್ದು ಆಸ್ಪತ್ರೆ ಸಿಬ್ಬಂದಿ ಅವರ ಸೇವೆಯನ್ನು ಸ್ಮರಿಸಿ ಬೀಳ್ಕೊಡುಗೆ ಮೂಲಕ ಆತ್ಮೀಯವಾಗಿ ಸನ್ಮಾನಿಸಿದರು.

     ಗೌರವ ಸ್ವೀಕರಿಸಿದ ವೈದ್ಯಾಧಿಕಾರಿ ಡಾ. ರಮೇಶ್ ಮಾತನಾಡಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ 2019 ರಿಂದ ಇಲ್ಲಿಯವರೆಗೆ ಏಳು ವರ್ಷಗಳ ಸುಧೀರ್ಘ ಸೇವೆಯಲ್ಲಿ ಅವರಿಸಿದ ಕೋವಿಡ್ ಸಂದರ್ಭವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಪ್ರಮುಖವಾಗಿ ನನ್ನ ಅವಧಿಯಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಸೆಂಟ್ರಲ್ ಲ್ಯಾಬ್, ಕ್ಯಾನ್ಸರ್ ಚಿಕಿತ್ಸಾ ಘಟಕ, ನೇರೋ ಸೆಂಟರ್, ಬ್ಲಡ್ ಬ್ಯಾಂಕ್ ಘಟಕ, ಹಿರಿಯ ನಾಗರಿಕರ ವಾರ್ಡ್,ಐ. ಸಿ. ಯು. ಘಟಕವನ್ನು ಸಾರ್ವಜನಿಕರ ಸೇವೆಗೆ ತಂದದ್ದು ಹೆಮ್ಮೆಯ ವಿಷಯ.ನನ್ನ ಅವಧಿಯಲ್ಲಿ ಸಾರ್ವಜನಿಕರಿಕರಿಗೆ ಉತ್ತಮ ಸೇವೆ ಸಂದಿದೆ ಎಂದರೆ ಅದಕ್ಕೆ ನಮ್ಮ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಯ ಸಹಕಾರ ಮುಖ್ಯ ಕಾರಣ ಹಾಗಾಗಿ ನನ್ನ ಮೆಚ್ಚಿನ ಸಿಬ್ಬಂದಿಗಳ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕರಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.

    ದ್ವಿತೀಯ ದರ್ಜೆ ಸಹಾಯಕ ಎಲ್. ಶ್ರೀನಿವಾಸ ಮೂರ್ತಿ ಮಾತನಾಡಿ 2018 ರಿಂದ ಇಲ್ಲಿಯವರೆಗೆ ಸಾರ್ವಜನಿಕ ಆಸ್ಪತ್ರೆಗೆ ಸೇವೆ ಸಲ್ಲಿಸಿರುವುದು ಒಂದು ಅಪೂರ್ವ ಅನುಭವ. ನನ್ನ ಸೇವೆಯನ್ನು ಸ್ಮರಿಸಿ ನನ್ನೆಲ್ಲಾ ಸರ್ಕಾರಿ ನೌಕರರು ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷನನ್ನಾಗಿಮಾಡಿ ಗೌರವ ಸೂಚಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಹಾಗೂ ತುರ್ತು ಸಂದರ್ಭದಲ್ಲಿ ತಾಲ್ಲೂಕಿನ ಸಾರ್ವಜನಿಕರು, ಗಣ್ಯರು, ಸಂಘ ಸಂಸ್ಥೆಗಳ ಮುಖಂಡರು ನಮಗೆ ಸ್ಪಂದಿಸಿದ್ದಾರೆ. ಮುಖ್ಯವಾಗಿ ನಮ್ಮ ಆಸ್ಪತ್ರೆ ಸಿಬ್ಬಂದಿ ನೀಡಿದ ಸಹಕಾರವನ್ನು ನಾನು ಮರೆಯಲಾಗುವುದಿಲ್ಲ. ಹೀಗಾಗಿ ಅವರೆಲ್ಲರಿಗೂ ನಾನೂ ಅಭಾರಿಯಾಗಿದ್ದೇನೆ ಎಂದು ಹೇಳಿದರು.

    ಬೀಳ್ಕೊಡುಗೆ ಕಾರ್ಯಕ್ರಮ ದಲ್ಲಿ ಆಸ್ಪತ್ರೆ ವೈದ್ಯರು ಸಹಾಯಕ ಸಿಬ್ಬಂದಿ ಸೇರಿದಂತೆ ಹಲವಾರು ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!