Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ, ಜೀವ ಬೆದರಿಕೆ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ಬಸ್ ನಿಲ್ಲಿಸುವ ಸಣ್ಣ ವಿಷಯಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ
, ಖಾಸಗಿ ಬಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 24, 2026 ರಂದು ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಅರುಣ್ ಕುಮಾರ್ ಎಂಬುವವರು ಪೊಲೀಸರಿಗೆ ಲಿಖಿತ ದೂರು ನೀಡಿರುವುದಾಗಿ ಚಾಲಕರ ಸಂಘದ ರಾಜ್ಯಾಧ್ಯಕ್ಷ ಎಸ್.ಪ್ರದೀಪ್  ತಿಳಿಸಿದ್ದಾರೆ.

​ಘಟನೆಯ ಹಿನ್ನೆಲೆ:
​ದೂರುದಾರರಾದ ಅರುಣ್ ಕುಮಾರ್ ಅವರು
'ನೂಗೊ' ಸಂಸ್ಥೆಯ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೂನ್ 24 ರಂದು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ TN12BJ5177 ಸಂಖ್ಯೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿನೋದ್ ಅರೇಕುಂಟಿ, ಸೀಟ್ ನಂ. 3L) ಎಂಬ ಪ್ರಯಾಣಿಕನು, ಬಸ್ ನಿಲ್ಲಿಸುವ ವಿಚಾರವಾಗಿ ಸಹ ಚಾಲಕ ಮಂಜುನಾಥ್ ಎಂಬುವವರೊಂದಿಗೆ ಜಗಳ ತೆಗೆದಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಬೆಳಗ್ಗೆ ನಾಗಸಂದ್ರ ಭಾಗದಲ್ಲಿ ಇಳಿಯುವಾಗ ತನ್ನ ಪರಿಚಯದವರನ್ನು ಕರೆಸಿ ಹಲ್ಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.

​ಎಮರ್ಜೆನ್ಸಿ ಹ್ಯಾಮರ್‌ನಿಂದ ಮಾರಣಾಂತಿಕ ಹಲ್ಲೆ:
​ಇದಾದ ಬಳಿಕ
, KA02 AM 3640 ಸಂಖ್ಯೆಯ ಬಿಳಿ ಬಣ್ಣದ ವಾಹನದಲ್ಲಿ ಬಂದ ಸುಮಾರು ಮೂರು ಜನ ಅಪರಿಚಿತರು ಬಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಸ್‌ನಲ್ಲಿದ್ದ ತುರ್ತು ನಿರ್ಗಮನದ ಗಾಜು ಒಡೆಯಲು ಬಳಸುವ ಸುತ್ತಿಗೆಯಿಂದ ಅರುಣ್ ಕುಮಾರ್ ಅವರ ತಲೆಗೆ ಬಲವಾಗಿ ಹೊಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಪರಿಣಾಮವಾಗಿ ಅವರ ತಲೆಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವವಾಗಿದೆ.

​ಡಿಪೋ ಒಳಗೂ ನುಗ್ಗಿ ರೌಡಿಸಂ, ಜೀವ ಬೆದರಿಕೆ:
​ಹಲ್ಲೆಯ ನಂತರ ಬಸ್ ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದ ವಾಹನವನ್ನು ಡಿಪೋ ಒಳಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ ಆರೋಪಿಗಳು ಅಲ್ಲಿಗೂ ಬೆನ್ನಟ್ಟಿ ಬಂದಿದ್ದಾರೆ. ಬಿಳಿ ಮತ್ತು ಕಪ್ಪು ಬಣ್ಣದ ಕಾರುಗಳಲ್ಲಿ ಬಂದ ಸುಮಾರು 6 ರಿಂದ 7 ಜನ ಅಪರಿಚಿತ ವ್ಯಕ್ತಿಗಳು ಡಿಪೋ ಒಳಗೆ ಅಕ್ರಮವಾಗಿ ನುಗ್ಗಿ
, "ಏನಾಗುತ್ತೋ ನೋಡೋಣ", "ನಿಮ್ಮನ್ನು ಬಿಡುವುದಿಲ್ಲ", "ನಿಮ್ಮನ್ನು ಕೊಲ್ಲುತ್ತೇವೆ" ಎಂದು ಮುಖಂಡರಿಗೆ ಹಾಗೂ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿದ್ದಾರೆ.

​ಈ ವೇಳೆ ಡಿಪೋದಲ್ಲಿದ್ದ ಸುಮಾರು 20 ರಿಂದ 30 ಜನ ಚಾಲಕರು ಮಧ್ಯಪ್ರವೇಶಿಸಿ ಹಲ್ಲೆ ತಡೆಯಲು ಯತ್ನಿಸಿದ್ದು, ಈ ಗೊಂದಲದಲ್ಲಿ ಮತ್ತೊಬ್ಬ ವ್ಯಕ್ತಿಗೂ ಗಾಯಗಳಾಗಿದೆ ಎನ್ನಲಾಗಿದೆ.

​ಕಾನೂನು ಕ್ರಮಕ್ಕೆ ಆಗ್ರಹ:
​ತಮ್ಮ ಆತ್ಮರಕ್ಷಣೆಗಾಗಿ ಮಾತ್ರ ತಾವು ಪ್ರಯತ್ನಿಸಿದ್ದಾಗಿ ತಿಳಿಸಿರುವ ದೂರುದಾರರು
, ಮುಖ್ಯ ಆರೋಪಿ ವಿನೋದ್ ಅರೇಕುಂಟಿ ಹಾಗೂ ಆತನ ಸಹಚರರ ವಿರುದ್ಧ ಹಲ್ಲೆ, ಕೊಲೆ ಬೆದರಿಕೆ, ಗಂಭೀರ ಗಾಯ ಹಾಗೂ ಡಿಪೋಗೆ ಅಕ್ರಮ ಪ್ರವೇಶ ಮಾಡಿದ ಆರೋಪದಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತಮಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಮಾದನಾಯಕನಹಳ್ಳಿ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ದೂರಿನೊಂದಿಗೆ ವೈದ್ಯಕೀಯ ವರದಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಲಗತ್ತಿಸಿ ಆಗ್ರಹ ಮಾಡಲಾಗಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!