ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಜಿಲ್ಲಾ ಜಾತ್ಯಾತೀತ ಜನತಾದಳದ ಕಚೇರಿಯಲ್ಲಿ ಮಹಾತ್ಮಗಾಂಧಿ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.
ಜೆಡಿಎಸ್.ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ಗಾಂಧಿಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ಸತ್ಯ ಮತ್ತು ಅಹಿಂಸೆಯ ಮೂಲಕ ದೇಶದ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ ರಾಷ್ಟ್ರಪಿತ ಮಹಾತ್ಮಗಾಂಧಿಜಿರವರಲ್ಲಿದ್ದ ದೇಶ ಭಕ್ತಿ ಹಾಗೂ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ಮಹನೀಯರ ಜಯಂತಿಗಳಿಗೆ ನಿಜವಾದ ಅರ್ಥ ಸಿಗುತ್ತದೆ.
ಜೀವನವಿಡಿ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಗಾಂಧಿ ಬ್ರಿಟೀಷರ ವಿರುದ್ದ ಎಂದಿಗೂ ಕೆರಳಲಿಲ್ಲ. ಶಾಂತಿಯುತ ಚಳುವಳಿಯಿಂದ ಸ್ವಾತಂತ್ರ್ಯವನ್ನು ಗಳಿಸಿದ ಪರಿಣಾಮ ದೇಶದಲ್ಲಿರುವ ಎಲ್ಲರೂ ನೆಮ್ಮದಿಯಾಗಿ ಬದುಕುತ್ತಿದ್ದಾರೆಂದು ಗುಣಗಾನ ಮಾಡಿದರು.
ಜೆಡಿಎಸ್.ಜಿಲ್ಲಾ ಕಾರ್ಯಾಧ್ಯಕ್ಷರಾದ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಯುವ ಘಟಕದ ಜಿಲ್ಲಾಧ್ಯಕ್ಷ ಓ.ಪ್ರತಾಪ್‌ಜೋಗಿ, ನ್ಯಾಯವಾದಿಗಳಾದ ಅಶೋಕ್‌ಬೆಳಗಟ್ಟ, ತಿಪ್ಪೇರುದ್ರಮ್ಮ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಸದಸ್ಯ ಎಂ.ಎಸ್.ಮಂಜುನಾಥ್, ಗೀತ, ಪ್ರಕಾಶ್ ಕೆ, ಶಿವಕುಮಾರ್, ಅಬ್ಬು, ರುದ್ರಣ್ಣ ಜಾಲಿಕಟ್ಟೆ, ಚಿದಾನಂದ್, ಪುಟ್ಟು, ಪುಟಾಣಿ ಇಂಚರ, ಧನಂಜಯ ಇನ್ನು ಅನೇಕರು ಜಯಂತಿಯಲ್ಲಿ ಭಾಗವಹಿದ್ದರು.




