Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ವಾಲ್ಮೀಕಿ ಜನಾಂಗಕ್ಕೆ ಪರಿಷ್ಕೃತ ಮೀಸಲಾತಿಯಂತೆ ನೇಮಕಾತಿ ಮಾಡದಿದ್ದರೆ ಉಗ್ರ ಹೋರಾಟ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನ್ಯಾ. ನಾಗಮೋಹನ್‌ದಾಸ್‌ಸಮಿತಿ ವರದಿ ಆಧಾರದ ಮೇಲೆ ಹೆಚ್ಚಿಸಲಾಗಿರುವ ಮೀಸಲಾತಿ ಪ್ರಮಾಣವನ್ನು ಅಳವಡಿಸಿಕೊಂಡು ಸರ್ಕಾರಿ ನೇಮಕಾತಿ ಮಾಡಬೇಕು. ಇಲ್ಲವಾದಲ್ಲಿ ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗಕ್ಕೆ ಭಾರೀ ಅನ್ಯಾವಾಗಲಿದೆ ಎಂದು ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ಹೇಳಿದೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಲ್ಮೀಕಿ ಬೆಳ್ಳಿ ಗಂಗಾಧರ ಅವರು, ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ನ ಅಧ್ಯಕ್ಷರಾದ  ಶ್ರೀ ವಾಲ್ಮೀಕಿ ಪ್ರಸನ್ನನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದೇವೆ. ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ಸದುದ್ದೇಶವನ್ನು ಉಚ್ಛನ್ಯಾಯಾಲಯದ ಅವಗಾಹನೆಗೆ ತಂದು ಇದೀಗ ಉದ್ಭವಸಿರುವ ತೊಂದರೆಯನ್ನು ನಿವಾರಿಸಲು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಪರಿಶಿಷ್ಟ ವಾಲ್ಮೀಖಿ ಸಮಾಜಕ್ಕೆ ಆಗಲಿರುವ ಅನ್ಯಾಯದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. 

ರಾಜ್ಯದಲ್ಲಿ 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಪಂಗಡದವರ ಜನಸಂಖ್ಯೆ 42.49 ಲಕ್ಷ ಮತ್ತು ಪರಿಶಿಷ್ಟ ಜಾತಿ ಜನಸಂಖ್ಯೆ 1.04 ಕೋಟಿಗಳಿಗೂ ಹೆಚ್ಚಿದೆ. ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಇವರ ಪ್ರಮಾಣ ಅನುಕ್ರಮವಾಗಿ ಶೇಕಡ 7 ಮತ್ತು ಶೇಕಡ 17 ರಷ್ಟಿದೆ. ಅದರ ವ್ಯಾಪ್ತಿಯಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸಾರ್ವಜನಿಕ ಉದ್ಯೋಗಗಳಲ್ಲಿ ಈ ಜನಾಂಗದವರ ಪ್ರಾತಿನಿಧ್ಯತೆ ಇವರ ಜನಸಂಖ್ಯೆಗೆ ಅನುಗುಣವಾಗಿ ಇಲ್ಲದೇ ಇರುವುದನ್ನು ಸರ್ಕಾರದ ಗಮನಕ್ಕೆ ಕಾಲ ಕಾಲಕ್ಕೆ ತಂದಿದ್ದರೂ ಸಹ 1954 ರಲ್ಲಿ ನಿಗದಿ ಮಾಡಿದ್ದ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಪಂಗಡದವರಿಗೆ ಶೇಕಡ 3 ರಿಂದ 7 ಕ್ಕೆ ಮತ್ತು ಪರಿಶಿಷ್ಟ ಜಾತಿಯವರಿಗೆ ಶೇಕಡ 15 ರಿಂದ 17 ಕ್ಕೆ ಹೆಚ್ಚಿಸದೇ ಇದ್ದ ಕಾರಣ 2022 ರಲ್ಲಿ ತಮ್ಮ ನೇತೃತ್ವದಲ್ಲಿ ಸಮುದಾಯಗಳು ನಡೆಸಿದ 257 ದಿನಗಳ ಸುಧೀರ್ಘ ಹೋರಾಟದ ಫಲವಾಗಿ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ಏಕ ಸದಸ್ಯ ಆಯೋಗ ರಚಿಸಿ, ವರದಿಯ ಶಿಫಾರಸ್ಸುಗಳ ಆಧಾರದ ಮೇಲೆ ಪರಿಶಿಷ್ಟ ಪಂಗಡದವರಿಗೆ ಚಾಲ್ತಿಯಲ್ಲಿದ್ದ ಮೀಸಲಾತಿ ಪ್ರಮಾಣವನ್ನು ಶೇಕಡ 15 ರಿಂದ 17 ಕ್ಕೆ ಹೆಚ್ಚಿಸಿತು ಎಂದರು.

ಈ ಆದ್ಯಾದೇಶದ ಮೇರೆಗೆ ನೇಮಕಾತಿಗಳಲ್ಲಿ ರೋಸ್ಟರ್ ಬಿಂದುಗಳನ್ನು ನೇರನೇಮಕಾತಿ ಮತ್ತು ಬಡ್ತಿ ನೇಮಕಾತಿಗಳಲ್ಲಿ ಹೊಸದಾಗಿ ಅಳವಡಿಸಿಕೊಂಡು ನೇಮಕಾತಿ ಮಾಡುವಂತೆ ಆದೇಶ ಹೊರಡಿಸಲಾಗಿತ್ತು. ಆದರೆ ಈ ಆದೇಶಗಳಿಂದ ಬಾಧಿತರಾದವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮತ್ತು ಘನ ಕರ್ನಾಟಕ ಉಚ್ಚನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಇವುಗಳ ಆಧಾರದ ಮೇಲೆ ಉಚ್ಛನ್ಯಾಯಾಲಯ ಕಳೆದ ನವೆಂಬರ್‌27 ರಂದು ಮಧ್ಯಂತರ ಆದೇಶ ನೀಡಿ ಹೆಚ್ಚಿಸಲಾದ ಮೀಸಲಾತಿ ಪ್ರಮಾಣದಂತೆ ಯಾವುದೇ ನೇಮಕಾತಿಯ ಬಗ್ಗೆ ಘನ ನ್ಯಾಯಾಲಯದ ಅಂತಿಮ ಆದೇಶದವರೆಗೆ ಅಧಿಸೂಚನೆಗಳನ್ನು ಹೊರಡಿಸಬಾರದೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದಾಗ್ಯೂ ಒಳಮೀಸಲಾತಿ ಇಲ್ಲದೇ ನೇಮಕಾತಿ ಮಾಡಲು ಮುಂದಾಗಿರುವುದು ಆತಂಕಕಾರಿ ಎಂದರು.

ಆದರೆ ಈ ಆದೇಶಗಳಿಂದ ಅನೇಕ ವರ್ಷಗಳಿಂದ ಸಾರ್ವಜನಿಕ ನೇಮಕಾತಿಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಗಳಲ್ಲಿ ಸೂಕ್ತ ಪ್ರಾತಿನಿದ್ಯ ಸಿಗದೆ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಸಮುದಾಯಗಳ ಯುವ ಸಮೂಹ ಮತ್ತು ವಿದ್ಯಾರ್ಥಿಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಶ್ರೀ ವಾಲ್ಮೀಕಿ ಪ್ರಸನ್ನನಂದ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ ಸಮಾಜದ ಮುಖಂಡ ಪಂಪಾಪತಿ, ಪ್ರೊ. ಗೋಪಾಲ ಕೃಷ್ಣ ಮತ್ತು ವಾಲ್ಮೀಕಿ ಸಮಾಜದ ಸಂಘಟನೆಗಳ ಮುಖಂಡರು ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!