Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ, ಎಫ್ಐಆರ್ ದಾಖಲು

Advertisement
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ವಿ.ಕೆ.ವೆಂಕಟೇಶ್ ಎಂಬುವರು ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಈ ಕುರಿತು ಆ ಅಧಿಕಾರ ವಿರುದ್ಧ ಎಫ್ಐಆರ್ ದಾಖಲಾಗಿದೆ.


ಬಿಮ್ಸ್​ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮಹಿಳಾ ಕಂಪ್ಯೂಟರ್ ಆಪರೇಟರ್​​ಗೆ ಬ್ಲ್ಯಾಕ್‍ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ವೆಂಕಟೇಶ್ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತೆ ನೀಡಿದ ದೂರು?:
ಸರ್ಕಾರಿ ಆಸ್ಪತ್ರೆ ಅಧೀಕ್ಷಕ ವಿ.ಕೆ.ವೆಂಕಟೇಶ್ ಕಳೆದ 2024ರ ನ.​25 ರಂದು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿದಲ್ಲದೆ
, ತನ್ನೊಂದಿಗೆ ಕಳೆದ ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ನಿಮ್ಮ ಕುಟುಂಬದ ಮರ್ಯಾದೆ ಹರಾಜು ಹಾಕುತ್ತೇನೆ ಎಂದು ಬೆದರಿಸಿ ಸಂತ್ರಸ್ತೆಯನ್ನು ಬಲವಂತವಾಗಿ ಕಾರ್​ನಲ್ಲಿ ಕೂರಿಸಿಕೊಂಡು ಬೆಳಗಲ್​ ರಸ್ತೆ ಬಳಿಯ ಆಕಾಶವಾಣಿ ಕೇಂದ್ರದ ಹತ್ತಿರ ಇರುವ ಲೇಔಟ್​ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆ ಮೇಲೆ ಪದೇ ಪದೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ತೆ ಮಹಿಳೆ ತಿಳಿಸಿದ್ದಾರೆ.

ನಿನ್ನ ಪತಿಯ ನಡವಳಿಕೆ ಸರಿ ಇಲ್ಲ, ಅವನನ್ನು ಏಕೆ ಮದುವೆಯಾದೆ? ನಿನ್ನನ್ನು ಬೀದಿಯಲ್ಲಿ ನಿಲ್ಲಿಸುತ್ತೇನೆ. ನಿನ್ನ ತಂಗಿ ಮತ್ತು ತಾಯಿಯನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಜೈಲಿಗೆ ಕಳುಹಿಸುತ್ತೇನೆ, ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ನಿನ್ನ ಪತಿ ಮತ್ತು ಕುಟುಂಬದವರಿಗೆ ಕಳುಹಿಸುತ್ತೇನೆ  ಎಂದು ಅಧೀಕ್ಷಕ ವಿ.ಕೆ. ವೆಂಕಟೇಶ್​ ಸಂತ್ರಸ್ತೆಗೆ ಬ್ಲಾಕ್​ಮೇಲ್​ ಮಾಡಿದ್ದಾರೆ ಎಂದು ಎಫ್​ಐಆರ್​ನಲ್ಲಿ ಪೊಲೀಸರು ದೂರು ಆಧರಿಸಿ ಉಲ್ಲೇಖಿಸಿದ್ದಾರೆ.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಶೋಭಾರಾಣಿ ಮಾತನಾಡಿ, ಆಸ್ಪತ್ರೆಯ ಮಹಿಳಾ ಸಿಬ್ಬಂದಿಯ ಮೇಲೆ ಸಹಾಯಕ ಆಡಳಿತಾಧಿಕಾರಿ ವಿ.ಕೆ.ವೆಂಕಟೇಶ್​ ಎಂಬುವವರು ಕಳೆದ ಎರಡೂವರೆ ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರಿನ ಮೇರೆಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST