Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಮಾನ ನಿಲ್ದಾಣದಲ್ಲಿ ‘ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿ’: ಸಚಿವ ಎಂ. ಬಿ. ಪಾಟೀಲ್

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ವಿಮಾನ ನಿಲ್ದಾಣದಲ್ಲಿ
'ಸ್ಯಾಟಲೈಟ್ ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿ' (ವಿಮಾನ ಚಾಲನಾ ತರಬೇತಿ ಕೇಂದ್ರ) ಸ್ಥಾಪಿಸಲು ಪ್ರಸಿದ್ಧ 'ಕಾರ್ವರ್ ಏವಿಯೇಷನ್' ಸಂಸ್ಥೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

​ಮಹಾರಾಷ್ಟ್ರದ ಬಾರಾಮತಿ ಮೂಲದ ಕಾರ್ವರ್ ಏವಿಯೇಷನ್ ಸಂಸ್ಥೆಯ ನಿರ್ದೇಶಕ ನೆವಿಲ್ ಭರೂಚ ಹಾಗೂ ವ್ಯವಸ್ಥಾಪಕ ಪರಮೇಶ್ ಪಾರೀಖ್ ಅವರೊಂದಿಗೆ ಸಚಿವರು ಇಂದು ಮಹತ್ವದ ಚರ್ಚೆ ನಡೆಸಿದರು.​

Advertisement

​ಸಮಗ್ರ ಮೂಲಸೌಕರ್ಯ: ಯೋಜನೆ ಕಾರ್ಯರೂಪಕ್ಕೆ ಬಂದರೆ ವಿಜಯಪುರದಲ್ಲಿ ಪೈಲಟ್ ತರಬೇತಿಯ ಜೊತೆಗೆ ವಿಮಾನಗಳ ನಿರ್ವಹಣೆ ಹಾಗೂ ದುರಸ್ತಿ ಸೇವೆ, ಹ್ಯಾಂಗರ್‌ಗಳು ಮತ್ತು ಗ್ರೌಂಡ್ ಸಪೋರ್ಟ್ ಸೌಲಭ್ಯಗಳು ಅಭಿವೃದ್ಧಿಯಾಗಲಿವೆ.

​ಉದ್ಯೋಗಾವಕಾಶ: ಉತ್ತರ ಕರ್ನಾಟಕ ಭಾಗದಲ್ಲಿ ವೈಮಾನಿಕ ಕ್ಷೇತ್ರಕ್ಕೆ ಹೊಸ ಉತ್ತೇಜನ ಸಿಗಲಿದ್ದು, ಸ್ಥಳೀಯ ಯುವಜನರಿಗೆ ನೂರಾರು ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗಾವಕಾಶಗಳು ಲಭಿಸಲಿವೆ.

​ಶುಲ್ಕದಲ್ಲಿ ರಿಯಾಯಿತಿ: ತರಬೇತಿ ಪಡೆಯುವ ಸ್ಥಳೀಯ ವಿದ್ಯಾರ್ಥಿಗಳಿಗೆ ಆಕರ್ಷಕ ಶುಲ್ಕ ರಿಯಾಯಿತಿ ನೀಡುವುದಾಗಿ ಸಂಸ್ಥೆಯು ಭರವಸೆ ನೀಡಿದೆ.

​ಅಧಿಕಾರಿಗಳು ಮತ್ತು ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಿ ಅಕಾಡೆಮಿಯ ಕಾರ್ಯಚಟುವಟಿಕೆಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಡಾ ಪ್ರಕರಣ: ಲೋಕಾಯುಕ್ತ ‘ಬಿ’ ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ‘ಬಳ್ಳಾರಿ ಚಲೋ’ ಬರೀ ಗಿಮಿಕ್, ಬಿಎಸ್ ವೈ ಭ್ರಷ್ಟಾಚಾರದ ಪಿತಾಮಹ: ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ಮೇಕೆದಾಟು ಯೋಜನೆ: CWC ಅಧ್ಯಕ್ಷರ ಭೇಟಿಯಾದ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಮಹಿಳೆಯರ ತ್ಯಾಗ, ಶಕ್ತಿ ಅಪಾರ: ರಾಮಾಯಣದಲ್ಲಿ ರಾಮನಿಗಿಂತ ಸೀತೆಯ ಪಾತ್ರವೇ ಶ್ರೇಷ್ಠ –ಸಿಎಂ ಡಿ.ಕೆ. ಶಿವಕುಮಾರ್ಸಾಮಾನ್ಯ ಪ್ರಯಾಣಿಕರಂತೆ 'ನಮ್ಮ ಮೆಟ್ರೋ' ಏರಿದ ಸಚಿವ ಕೃಷ್ಣ ಬೈರೇಗೌಡ:‘ನಮ್ಮ ಮೆಟ್ರೋ’ ಪಿಂಕ್ ಲೈನ್ ಉದ್ಘಾಟನೆಗೆ ಸಿದ್ಧ: ಸೆಪ್ಟೆಂಬರ್‌ನಲ್ಲೇ ಕಾಳೇನ ಅಗ್ರಹಾರ-ತಾವರೆಕೆರೆ ಮಾರ್ಗ ಮುಕ್ತಾಯ?KPSC ಅಕ್ರಮಗಳಿಗೆ ಎನ್‌ಡಿಎ ಪಿತಾಮಹ, ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿನಾಗೇಂದ್ರ, ತುಕಾರಾಂ, ಭರತ್‌ರೆಡ್ಡಿಗೆ ಜನಾರ್ದನ ರೆಡ್ಡಿ ಬಣದ ನಾಯಕರ ತೀವ್ರ ಸವಾಲು!KRIDLನಲ್ಲಿ ಶೇ.7ರಷ್ಟು ಲಂಚ: ಇಬ್ಬರು ಸಚಿವರನ್ನು ವಜಾಗೊಳಿಸಿ, ಸಿಬಿಐ ತನಿಖೆಗೆ ಆರ್‌ಅಶೋಕ ಆಗ್ರಹನೂರು ಕೇಸ್ ಹಾಕಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಶಿವಕುಮಾರ್, ಸಿದ್ದರಾಮಯ್ಯ ಆಕ್ರೋಶ