ಚಂದ್ರವಳ್ಳಿ ನ್ಯೂಸ್, ಮಂಡ್ಯ:
ನಗರದ ಹೊಳಲು ಸರ್ಕಲ್ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನೂತನ ಜಿಲ್ಲಾ ಕಾಂಗ್ರೆಸ್ ಭವನದ (ಇಂದಿರಾ ಭವನ) ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಶಾಸಕರಾದ ಕೆ.ಎಂ. ಉದಯ್, ರವಿಕುಮಾರ್ ಗಣಿಗ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.




