ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾಮಾಜಿಕ ಕಾರ್ಯಕರ್ತರು, ಚಿತ್ರದುರ್ಗದ ‘ಸ್ಪೀಚ್’ ಸಂಸ್ಥೆಯ ಸಂಸ್ಥಾಪಕರು ಹಾಗೂ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಹೆಚ್.ರಾಮಚಂದ್ರಪ್ಪ (59) ಅವರು ಶನಿವಾರ ಗೋನೂರಿನಲ್ಲಿ ನಿಧನರಾಗಿದ್ದಾರೆ.
ಅರೇಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸತತ ಎರಡು ಅವಧಿಗೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು, ಗ್ರಾಮೀಣ ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದರು. ಮೃತರು ಪತ್ನಿ, ಸಹೋದರ, ಸಹೋದರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಇಂದು ಅಂತ್ಯಕ್ರಿಯೆ-
ಮೃತರ ಅಂತ್ಯಕ್ರಿಯೆಯು ಭಾನುವಾರ (ಜೂನ್ 07, 2026) ಮಧ್ಯಾಹ್ನ 2 ಗಂಟೆಗೆ ಅವರ ಸ್ವಗ್ರಾಮವಾದ ಹೊಳಲ್ಕೆರೆ ತಾಲೂಕಿನ ನೆಹರು ಕಾಲೋನಿಯ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಮಚಂದ್ರಪ್ಪ ಅವರ ನಿಧನಕ್ಕೆ ಸ್ಥಳೀಯ ಗಣ್ಯರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



