Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು  ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ "ಸೇವಾಸಿಂಧು" ಪೋರ್ಟಲ್ https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. 2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ.

ರಾಜ್ಯದ  ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ "ಸೇವಾಸಿಂಧು" ಪೋರ್ಟಲ್ ಮೂಲಕ 2026 ರ ಜೂನ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಟ್ರಬಲ್ ಶೂಟರ್’ ಡಿ.ಕೆ. ಶಿವಕುಮಾರ್: ಮುಖ್ಯಮಂತ್ರಿ ಹುದ್ದೆಯ ಹಾದಿ ಮತ್ತು ಮಹತ್ವದ ವಿಶ್ಲೇಷಣೆ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ ರಾಜಕೀಯ ಜೀವನದ ರೋಚಕ ಹಾದಿಅಧಿಕಾರದ ಗದ್ದುಗೆಗೆ ತಾಳ್ಮೆ ಮತ್ತು ಹೋರಾಟದ ಪರ್ಯಾಯ ಹೆಸರು: ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ಎನ್.ವೈ.ಜಿ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಾಯಕರಾದ ಜಿ.ಒ ನಾಗರಾಜ್, ಕೆ.ಟಿ ರುದ್ರಮುನಿ ಒತ್ತಾಯಬತ್ತಿದ ನೆಲದ ಒಡಲಲ್ಲಿ ಚಿಗುರಿದ ಆಶಾಕಿರಣ: ಹಿರಿಯೂರಿನ ‘ಮುಕ್ತ ವಿಚಾರ ವೇದಿಕೆ’ ತಂದ ದೀಪದ ಕುಡಿಹಿರಿಯ ಮುತ್ಸದ್ದಿ ಎನ್.ವೈ. ಗೋಪಾಲಕೃಷ್ಣಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ನಾಯಕರ ಒತ್ತಾಯಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯಯುತ ಪ್ರಾತಿನಿಧ್ಯಕ್ಕೆ ಆಗ್ರಹ:ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ; ನಿಖಿಲ್ ಅಭಿನಂದನೆಜೋಧಪುರದಲ್ಲಿ ಕ್ರಾಂತಿ: ಸ್ವದೇಶಿ ನಿರ್ಮಿತ ‘ದಿವ್ಯಾಸ್ತ್ರ ಎಂಕೆ-1’ ಯುಎವಿ ಯಶಸ್ವಿ ಪರೀಕ್ಷೆ!