ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಇದೇ ಮೇ 17ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ 1996ನೇ ಬ್ಯಾಚ್ ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ.ಗಗನ್ ದೀಪ್ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದಾವಣಗೆರೆ ಪೂರ್ವವಲಯ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಬಿ.ಆರ್.ರವಿಕಾಂತೇಗೌಡ ಅಧ್ಯಕ್ಷತೆ ವಹಿಸುವರು. ಡಾ.ಎ.ಎಸ್.ವಿಜಯಲಕ್ಷ್ಮಿ ಗಗನ್ ದೀಪ್ ಉದ್ಘಾಟನೆ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಟಿ.ಶೇಖರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹೆಚ್.ಪರಮೇಶ್ವರ, ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಆರ್.ಶಿವಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.


