Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನವರಿ-16 ರಿಂದ 26 ರವರೆಗೆ ಪೂರ್ಣಚಂದ್ರ ತೇಜಸ್ವಿಯವರ ನಾಟಕಗಳ ಪ್ರದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡು ಕಂಡ ಶ್ರೇಷ್ಠ ಸಾಹಿತಿ
, ಪರಿಸರವಾದಿ ಹಾಗೂ ಚಿಂತಕರಾದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಉದ್ದೇಶದಿಂದ, ಲಾಲ್‍ಬಾಗ್  ಸಸ್ಯಶಾಸ್ತ್ರೀಯ ತೋಟದಲ್ಲಿ ಜನವರಿ 14 ರಿಂದ 26 ರವರೆಗೆ ತೇಜಸ್ವಿ ವಿಸ್ಮಯಫಲಪುಷ್ಪ ಪ್ರದರ್ಶನವನ್ನು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ನಾಟಕಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಈ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಅಂಗವಾಗಿ ತೇಜಸ್ವಿಯವರ ಪ್ರಸಿದ್ದ ಸಾಹಿತ್ಯಕ ಕೃತಿಗಳನ್ನು ಆಧಾರವಾಗಿಟ್ಟುಕೊಂಡು ಸಾರ್ವಜನಿಕರ ಸಾಂಸ್ಕøತಿಕ ಆಸಕ್ತಿಯನ್ನು ಉತ್ತೇಜಿಸುವ ದೃಷ್ಟಿಯಿಂದ 6 ನಾಟಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಜನವರಿ 16 ರಂದು ನನ್ನ ತೇಜಸ್ವಿ, ಜನವರಿ 18 ರಂದು ಕರ್ವಾಲೋ, ಜನವರಿ 20 ರಂದು ಕೃಷ್ಣೇ ಗೌಡನ ಆನೆ, ಜನವರಿ 22 ರಂದು ಜುಗಾರಿ ಕ್ರಾಸ್, ಜನವರಿ 24 ರಂದು ಯಮಳ ಸೋಲು ಹಾಗೂ ಜನವರಿ 26 ರಂದು ಅಣ್ಣನ ನೆನಪು ನಾಟಕಗಳನ್ನು ಆಯೋಜಿಸಲಾಗಿದೆ.

ಈ ನಾಟಕಗಳು ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ತೇಜಸ್ವಿಯವರ ಪರಿಸರ ಚಿಂತನೆಗಳನ್ನು ಜನಸಾಮಾನ್ಯರ ನಡುವೆ ಪರಿಣಾಕಾರಿಯಾಗಿ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿವೆ. ಹಾಗೂ ಸರ್ಕಾರದ ಆಶಯಗಳಿಗೂ ಅನುಗುಣವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳುವ ಮೂಲಕ  ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST