E-PAPER
18 Nov 2026, 12:29:55 AM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಎಫ್‌ಆರ್‌ಆರ್‌ಒಗೆ ವಿದೇಶಿ ಪ್ರಜೆ ಎಂದು ಸಾಬೀತುಪಡಿಸುವ ಅಧಿಕಾರವಿಲ್ಲ: ಹೈಕೋರ್ಟ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವ್ಯಕ್ತಿಯೊಬ್ಬರ ಬಳಿಯಿರುವ ದಾಖಲೆಗಳನ್ನು ಪರಿಶೀಲಿಸಿ ಅವರು ವಿದೇಶಿ ಪ್ರಜೆ ಎಂಬುದನ್ನು ಸಾಬೀತುಪಡಿಸುವ ಅಧಿಕಾರ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್‌ಆರ್‌ಆರ್‌ಒ) ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ವ್ಯಕ್ತಿಯ ಪೌರತ್ವದ ಕುರಿತು ನ್ಯಾಯಮಂಡಳಿಯಲ್ಲಿ ಕಾನೂನುಬದ್ಧ ವಿಚಾರಣೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ಅವರನ್ನು ದೇಶದಿಂದ ಗಡಿಪಾರು ಮಾಡುವಂತಿಲ್ಲ ಎಂದು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ಏಕಸದಸ್ಯ ಪೀಠ ತಿಳಿಸಿದೆ.

ಅಕ್ರಮ ಬಾಂಗ್ಲಾದೇಶಿ ವಲಸಿಗನೆಂಬ ಶಂಕೆಯ ಮೇರೆಗೆ ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿ ಕೊತ್ತನೂರಿನ ಪುನರ್ವಸತಿ ಕೇಂದ್ರದಲ್ಲಿರಿಸಿದ್ದ ಅಬ್ದುಲ್ ರಹೀಂ ಮತ್ತು ಜಾಹಿದುಲ್ ಇಸ್ಲಾಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಕೋರ್ಟ್ ಈ ತೀರ್ಪು ನೀಡಿದೆ.

ಅರ್ಜಿದಾರರು ಆಧಾರ್, ಪ್ಯಾನ್, ಮತದಾರರ ಗುರುತಿನ ಚೀಟಿ ಸೇರಿದಂತೆ ಭಾರತೀಯ ಪೌರತ್ವದ ದಾಖಲೆಗಳನ್ನು ಹೊಂದಿದ್ದರೂ, ಸೂಕ್ತ ಅವಕಾಶ ನೀಡದೆ ಏಕಾಏಕಿ ವಿದೇಶಿ ಪ್ರಜೆ ಎಂದು ನಿರ್ಧರಿಸುವುದು ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮತ್ತೊಂದೆಡೆ, ಅರ್ಜಿದಾರರು ಅನ್ಯ ರಾಜ್ಯದಲ್ಲಿ ವಿದೇಶಿಯರ ಕಾಯ್ದೆಯಡಿ ಶಿಕ್ಷೆಗೊಳಗಾಗಿದ್ದಾರೆ ಮತ್ತು ಅವರ ಕೆಲ ದಾಖಲೆಗಳು ನಕಲಿ ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.

ಈ ಎಲ್ಲಾ ಅಂಶಗಳನ್ನು ಪರಿಗಣಿಸಿರುವ ಹೈಕೋರ್ಟ್, ಸಂಬಂಧಪಟ್ಟ ಪ್ರಾಧಿಕಾರಗಳು ಕಾನೂನುಬದ್ಧವಾಗಿ ವಿಚಾರಣೆ ನಡೆಸಿ ಅಂತಿಮ ತೀರ್ಪು ಬರುವವರೆಗೆ ಗಡಿಪಾರು ಕ್ರಮ ಕೈಗೊಳ್ಳದಂತೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದವಲ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಹೂ ಕೋಸು ನಾರು ಪೂರೈಕೆ:ಬೆಳೆ ನಾಶವಾಗಿ ಕಂಗಾಲಾದ ರೈತಬಸವಣ್ಣನವರ ಮೇಲೆ ಕಳಂಕದ ಮಾತು ಸಲ್ಲದು; ಅವರ ವಚನಗಳೇ ಆರೋಪಗಳಿಗೆ ಕನ್ನಡಿ!ಬಿಲ್ಕಿಸ್ ಬಾನೋ ಪ್ರಕರಣ: 17 ವರ್ಷ ಜೈಲುವಾಸ ಪೂರೈಸಿದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು'ಪ್ರೆಸ್' ಸ್ಟಿಕ್ಕರ್ ಬಳಸಿ ಶವ ಸಾಗಾಟ: ರಾಜಾಜಿನಗರ ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿ ಕರಾಳ ಮುಖ ಬಯಲು!ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಬೇಡ: ಯುರೋಪ್ ರಾಜಕಾರಣಿ ಹೇಳಿಕೆಗೆ ಇಟಲಿ ಸಂಸದೆ ಡೆಬೊರಾ ಬೆರ್ಗಾಮಿನಿ ತಿರುಗೇಟುಯುಪಿ ಚುನಾವಣೆಗೆ ಕಾಂಗ್ರೆಸ್ ರಣತಂತ್ರ: 181 ಸೀಟುಗಳ ಪಟ್ಟಿ ಸಲ್ಲಿಕೆ, ಎಸ್‌ಪಿ ಜೊತೆ ಮಹತ್ವದ ಸಭೆವಿಧಾನ ಪರಿಷತ್‌ನ ನಾಲ್ವರು ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರನಿಗಮ-ಮಂಡಳಿ ನೇಮಕಾತಿ: ಕಾಂಗ್ರೆಸ್‌ನಲ್ಲಿ ಭಿನ್ನಮತ, ಆರ್‌ಎಸ್‌ಎಸ್ ಕಾರ್ಯಕರ್ತರ ಸೇರ್ಪಡೆಗೆ ತೀವ್ರ ಆಕ್ಷೇಪಹಿರಿಯೂರು ಉಪಚುನಾವಣೆ-ಎನ್‌ಡಿಎ ಮೈತ್ರಿಯಲ್ಲಿ ಟಿಕೆಟ್ ಕಗ್ಗಂಟು!ಹಿರಿಯೂರು ಉಪಚುನಾವಣೆ: ಬಿಜೆಪಿಯ ದೆಹಲಿ ಅಂಗಳಕ್ಕೆ ಮೂವರ ಹೆಸರು ರವಾನೆ?