Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪೊಲೀಸ್ ಇಲಾಖೆ ವತಿಯಿಂದ ಮೃತರ ಗೌರವಾರ್ಥ ಮೂರು ಸುತ್ತಿನ ಕುಶಾಲತೋಪು ಸಿಡಿಸುವ ಮೂಲಕ ದಿವಗಂತ ಹೆಚ್.ಹನುಮಂತಪ್ಪ ಗೌರವ ವಂದನೆ ಸಲ್ಲಿಸಲಾಯಿತು.

ಎರಡು ನಿಮಿಷದ ಮೌನಾಚರಣೆ ಆಚರಿಸಲಾಯಿತು. ದಿವಗಂತ ಹೆಚ್.ಹನುಮಂತಪ್ಪ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾದ ರಾಷ್ಟ್ರಧ್ವಜವನ್ನು ಪುತ್ರ ಜಿ.ಹೆಚ್.ಮೋಹನ್ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಜೋಗಿಮಟ್ಟಿಯ ಮುಕ್ತಿಧಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಸಲಾಯಿತು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದ ಗೋವಿಂದ ಎಂ ಕಾರಜೋಳ, ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘಮೂರ್ತಿ, ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಮಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ರಾಜ್ಯ ದ್ರಾಕ್ಷಾ ಮಂಡಳಿ ಅಧ್ಯಕ್ಷ ಡಾ.ಯೋಗಿಶ್ ಬಾಬು,

ಮಾಜಿ ಸಚಿವ ಹಾಗೂ ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್,  ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಖ್ಯಾತ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ್, ಮಾಯಕೊಂಡ ಶಾಸಕ ಬಸಂತಪ್ಪ, ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ದಾವಣಗೆರೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್, ಮೊಳಕಾಲ್ಮೂರು ತಾಲ್ಲೂಕು ಸಿದ್ದಯ್ಯನಕೋಟೆ ಮಠದ ಬಸವಲಿಂಗ ಸ್ವಾಮೀಜಿ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ,‌ಕಂಠೀರವ ಸ್ಟೋಡಿಯೋ ಅಧ್ಯಕ್ಷ ಮೆಹಬೂಬ್ ಪಾಷ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್,

ದಾವಣಗೆರೆ ಪೂರ್ವ ವಲಯ ಐಜಿಪಿ ರವಿಕಾಂತೇ ಗೌಡ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜನಪತ್ರಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಹೆಚ್.ಹನುಮಂತಪ್ಪ ಅವರ ಅಂತಿಮ ದರ್ಶನ ಪಡೆದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.