Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಕ್ರಮಗಳ ಹಿಂದೆ ಜಿಬಿಎ ಚುನಾವಣೆ ಲೆಕ್ಕಾಚಾರ?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಧಾನಿ ಬೆಂಗಳೂರಿನ ಸೌಂದರ್ಯೀಕರಣ ಹಾಗೂ ಮೂಲಸೌಕರ್ಯ ವೃದ್ಧಿಗೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರು ಹಲವು ಕಟ್ಟುನಿಟ್ಟಿನ ಹಾಗೂ ದಿಟ್ಟ ಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಸಚಿವರ ಈ ಕಾರ್ಯವೈಖರಿ ನಗರದಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದ್ದರೂ
, ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗುತ್ತಿದೆ. ಈ ಎಲ್ಲಾ ಕ್ರಾಂತಿಕಾರಿ ನಡಾವಳಿಗಳ ಹಿಂದೆ ಮುಂಬರುವ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' ಚುನಾವಣೆಯ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಪ್ರಶ್ನೆಯೂ ಈಗ ಮೂಡಿದೆ.

ನಗರದ ಅಂದ ಹೆಚ್ಚಿಸಲು ಕೈಗೊಂಡ ಪ್ರಮುಖ ಬಿಗಿ ಕ್ರಮಗಳು:
ಫುಟ್‌ಪಾತ್ ಒತ್ತುವರಿ ತೆರವು: ನಗರದ ಐದು ಪಾಲಿಕೆ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ಪಾದಚಾರಿ ಮಾರ್ಗ ಅತಿಕ್ರಮಿಸಿದ್ದನ್ನು ತೆರವುಗೊಳಿಸಲಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆಯಾಗದಂತೆ, ನಾಜೂಕಾಗಿ ಪರಿಸ್ಥಿತಿಯನ್ನು ನಿಭಾಯಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಬೀಡಾಡಿ ವಾಹನಗಳ ಜಪ್ತಿ: ರಸ್ತೆ ಬದಿಗಳಲ್ಲಿ ವರ್ಷಗಟ್ಟಲೆ ಬಿದ್ದಿರುವ, ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿರುವ ಬೀಡಾಡಿ ವಾಹನಗಳನ್ನು ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಇದಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಫುಟ್‌ಪಾತ್ ರೈಡಿಂಗ್‌ಗೆ 5,000 ದಂಡ!: ಪಾದಚಾರಿ ಮಾರ್ಗದಲ್ಲಿ ಬೈಕ್ ಹಾಗೂ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಸಚಿವರು, ಪ್ರಸ್ತುತ ಇರುವ ದಂಡದ ಮೊತ್ತವನ್ನು 5,000ಕ್ಕೆ ಹೆಚ್ಚಿಸುವಂತೆ ಕೋರಿ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ.

ಕಸದ ಸಮಸ್ಯೆಗೆ ಶಾಶ್ವತ ಮುಕ್ತಿ: ಬೆಂಗಳೂರಿಗರನ್ನು ಬಹುಕಾಲದಿಂದ ಪೀಡಿಸುತ್ತಿರುವ 'ಗಾರ್ಬೇಜ್‌' ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಚಿವರು ಮುಂದಿನ ಹಂತದ ಯೋಜನೆಗಳನ್ನು ಪ್ರಕಟಿಸಿದ್ದು, ಅಧಿಕಾರಿಗಳಿಗೆ ಸ್ಪಷ್ಟ ಗಡುವು ನೀಡಿದ್ದಾರೆ.

ಆಡಳಿತ ಯಂತ್ರಕ್ಕೆ ಚುರುಕು: ಗಮನ ಸೆಳೆದ ಸಚಿವರ ಕಾರ್ಯವೈಖರಿ:
ನಗರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವ ಕೃಷ್ಣ ಬೈರೇಗೌಡ ಅವರೇ ಸ್ವತಃ ಮೈದಾನಕ್ಕಿಳಿದು ಕೆಲಸ ಮಾಡುತ್ತಿದ್ದಾರೆ. ಕರ್ತವ್ಯಲೋಪ ಎಸಗುವ ಅಧಿಕಾರಿಗಳನ್ನು ಸಭೆಗಳಲ್ಲೇ ತರಾಟೆಗೆ ತೆಗೆದುಕೊಳ್ಳುವ ಅವರು, ಅದೇ ಸಮಯದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಸಿಬ್ಬಂದಿಯ ಬೆನ್ನಿಗೆ ನಿಲ್ಲುತ್ತಿದ್ದಾರೆ. ಇದು ಆಡಳಿತ ಯಂತ್ರದಲ್ಲಿ ಹೊಸ ಚುರುಕು ಮೂಡಿಸಿದೆ. 

ಜಿಬಿಎ (GBA) ಚುನಾವಣೆ ಮೇಲೆ ಬೀರಲಿದೆಯೇ ಪ್ರಭಾವ?:
ಒಂದು ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ನಡೆದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂಬ ವಿಶ್ಲೇಷಣೆಗಳಿದ್ದವು. ಆದರೆ, ಸಚಿವರ ಈ 'ಬೆಂಗಳೂರು ಸುಧಾರಣಾ ಸರಣಿ' ನಿರ್ಧಾರಗಳಿಂದಾಗಿ ಸರ್ಕಾರದ ಮೇಲಿದ್ದ ನಕಾರಾತ್ಮಕ ಅಭಿಪ್ರಾಯ ಬದಲಾಗುತ್ತಿದೆ.

ನಗರದ ಅಭಿವೃದ್ಧಿ ಹಾಗೂ ಮೂಲಸೌಕರ್ಯವೇ ಪ್ರಮುಖ ವಿಷಯವಾದರೆ, ಈ ಎಲ್ಲಾ ಬಿಗಿ ಕ್ರಮಗಳು ಮುಂಬರುವ ಜಿಬಿಎ ಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ ದೊಡ್ಡ ಮಟ್ಟದ ರಾಜಕೀಯ ಲಾಭ ತಂದುಕೊಡುವ ಸಾಧ್ಯತೆಯನ್ನು ತಜ್ಞರು ತಳ್ಳಿಹಾಕುವಂತಿಲ್ಲ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!