Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ರೈತ ಯುವಕರ ಮದುವೆ ಆಗುವ ಹೆಣ್ಣುಗಳಿಗೆ ವಿಶೇಷ ಭತ್ಯೆ ನೀಡಿ

ಚಂದ್ರವಳ್ಳಿ ನ್ಯೂಸ್, ತುಮಕೂರು:
ರೈತ ಮಕ್ಕಳಿಗೆ, ಯುವಕರಿಗೆ ಮದುವೆ ಆಗಲು ಹುಡುಗಿಯರು ಸಿಗುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೈತರು, ಹಳ್ಳಿಯಲ್ಲಿ ಇರುವವರು ಎಂದರಂತೂ ಹೆಣ್ಣು ಕೊಡಲು ಮುಂದೆ ಬರುವವರೇ ಇಲ್ಲ ಕುಣಿಗಲ್​​ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ವಿಶೇಷ ಭತ್ಯೆ ನೀಡುವಂತೆ ಕೋರಿರುವ ಪತ್ರ ಭಾರಿ ವೈರಲ್​​ ಆಗಿದೆ.

ಪತ್ರದಲ್ಲೇನಿದೆ?:
ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಭಿನ್ನ ವಿಶಿಷ್ಟ ಎನ್ನಬಹುದಾದ ಪತ್ರ ಬರೆದು ಗಮನ ಸೆಳೆದಿದ್ದಾರೆ. ಕೃಷಿಯಲ್ಲಿ ತೊಡಗಿರುವ ತಾಲೂಕಿನ ಗಂಡು ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಅವರು ಆಗ್ರಹಿಸಿದ್ದಾರೆ.


ನನ್ನ ಮತ ಕ್ಷೇತ್ರ ಕುಣಿಗಲ್ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಭನೆ ಹೆಚ್ಚಿದೆ. ಹೀಗಾಗಿ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ಅವರು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, ಮೂವತ್ತು ವರ್ಷ ದಾಟಿದರೂ ಅವರ ವಿವಾಹ ನಡೆಯುತ್ತಿಲ್ಲ.

ಹೀಗಾಗಿ ಅವರು ತೊಂದರೆಗೆ ಸಿಲುಕಿದ್ದು, ವ್ಯವಸಾಯ ಮಾಡಿಕೊಂಡಿರುವವರನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ, ವಿಶೇಷ ಸ್ಥಾನಮಾನ ಘೋಷಿಸಬೇಕೆಂದು ಶಾಸಕರು ಆಗ್ರಹಿಸಿದ್ದಾರೆ.
ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ
10 ಲಕ್ಷ ಠೇವಣಿ ಇಡುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದರು.


ಹುಡುಗಿಯರು ಹೆಚ್ಚಾಗಿ ಸರ್ಕಾರಿ ನೌಕರರು, ಸಿಟಿಗಳಲ್ಲಿರುವ ಗಂಡು ಮಕ್ಕಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು, ಕೂಲಿ ಕಾರ್ಮಿಕರ ಮಕ್ಕಳನ್ನು ಮದುವೆ ಆಗಲು ಯಾರೂ ಒಪ್ಪದ ಕಾರಣ ಸರ್ಕಾರ ಹೊಸ ಯೋಜನೆ ಜಾರಿಗೆ ತರಬೇಕು ಎಂದು ಶಾಸಕರು ಆಗ್ರಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ