Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸರ್ಕಾರಿ ನೌಕರರು ಕಡ್ಡಾಯವಾಗಿ ಖಾಗಿ ವಸ್ತ್ರ ತೊಡಲು ಆದೇಶಿಸಿದ ಸರ್ಕಾರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ನೌಕರರು ಕಡ್ಡಾಯವಾಗಿ ಖಾದಿ ಬಟ್ಟೆ ಬಳಕೆ ಮಾಡುಲಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸುವುದು ಕಡ್ಡಾಯ ಮಾಡಲಾಗಿದೆ. ಈ ಯೋಜನೆಗೆ ಏಪ್ರಿಲ್
24ರಂದು ಚಾಲನೆ ನೀಡಲಾಗುತ್ತದೆ.

ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ಹಾಗೂ ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ಮಾಡಿ ತೀರ್ಮಾನಿಸಲಾಗಿದೆ.

ಸಭೆಯ ನಿರ್ಧಾರಗಳು:
ಎಲ್ಲಾ ಅಧಿಕಾರಿ, ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಿ ಕರ್ತವ್ಯ ನಿರ್ವಹಿಸುವುದು.

ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.
ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್
,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.

ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳನ್ನು ತೊಡಬೇಕು ಎಂದು ಸೂಚಿಸಲಾಗಿದೆ.

ಸೇನಾ ಕ್ಯಾಂಟೀನ್ ಮಾದರಿಯಲ್ಲಿ ಎಂಎಸ್​ಐಎಲ್​ ಸಂಸ್ಥೆಯ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು ಸರ್ಕಾರಿ ನೌಕರರ ಕ್ಯಾಂಟೀನ್ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.

ಕೆಎಸ್​ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!