Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸ್ವಾವಲಂಬಿ ಬದುಕಿಗೆ ಗ್ಯಾರಂಟಿ ಯೋಜನೆಗಳು ಆಸರೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಬಡವರ ಸ್ವಾವಲಂಬಿ ಬದುಕಿಗೆ ಆಸರೆಯಾಗಿದ್ದು, ಆರ್ಥಿಕ ಬಲವರ್ಧನೆಗೆ ಕಾರಣವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಆರ್. ಶಿವಣ್ಣ ಅವರು ಅಭಿಪ್ರಾಯಪಟ್ಟರು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಪ್ರಚಾರ ಕೈಗೊಳ್ಳುವ ಸಲುವಾಗಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಕಲಾ ಜಾಥಾಸಂಚಾರಿ ಪ್ರದರ್ಶನ ಕಾರ್ಯಕ್ರಮದ ವಿಶೇಷ ವಾಹನಕ್ಕೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಬಳಿಕ ಮಾತನಾಡಿದರು.


ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಘನತೆಯಿಂದ ಜೀವನ ಸಾಗಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾದವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂಬ ಆಶಯದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.  ಈ ಯೋಜನೆಗಳು ರಾಜ್ಯದ ಜನಸಾಮಾನ್ಯರ ಬದುಕಿನಲ್ಲಿ ಸುಧಾರಣೆ ತಂದಿರುವುದಲ್ಲದೆ, ಆರ್ಥಿಕ ಸಬಲತೆಗೆ ಇಂಬು ನೀಡಿದೆ. 

ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಯೋಜನೆಗಳಿಂದ ಜನರಿಗೆ ಉಳಿತಾಯವಾಗುತ್ತಿರುವ ಹಣದಿಂದ ಜನರ ಕೊಳ್ಳುವಿಕೆ ಶಕ್ತಿಗೆ ಹೆಚ್ಚಿನ ಸಾಮಥ್ರ್ಯ ಬಂದಿದೆ.  ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ.  ಈ ಯೋಜನೆಗಳ ವ್ಯಾಪಕ ಪ್ರಚಾರಕ್ಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಕಲಾ ಜಾಥಾಕಾರ್ಯಕ್ರಮ ಶ್ಲಾಘನೀಯವಾಗಿದ್ದು, ಹೆಚ್ಚು ಹೆಚ್ಚು ಜನರನ್ನು ಗ್ಯಾರಂಟಿ ಯೋಜನೆಗಳು ತಲುಪುವಂತಾಗಲಿ ಎಂದು ಶಿವಣ್ಣ ಅವರು ಆಶಯ ವ್ಯಕ್ತಪಡಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಇಲಾಖೆ ಏರ್ಪಡಿಸಿರುವ ಕಲಾ ಜಾಥಾಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಏರ್ಪಡಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು, ಜನರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯೋಜನೆಗಳ ಬಗ್ಗೆ ಗ್ರಾಮೀಣ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ.  ಈ ನಿಟ್ಟಿನಲ್ಲಿ ಕಲಾಜಾಥಾ ಕಾರ್ಯಕ್ರಮವನ್ನು ಗ್ರಾಮೀಣ ಭಾಗಗಳಲ್ಲಿ ಏರ್ಪಡಿಸಿ, ವ್ಯಾಪಕ ಪ್ರಚಾರ ನೀಡುವಂತಾಗಲಿ ಎಂದರು.

ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಕಲಾಜಾಥಾ ಕಾರ್ಯಕ್ರಮದ ಬಗ್ಗೆ ವಿವರ ನೀಡಿ, ಎಲ್‍ಇಡಿ ಎಲೆಕ್ಟ್ರಾನಿಕ್ ಪರದೆ ಹೊಂದಿರುವ ಕಲಾಜಾಥಾ ವಿಶೇಷ ವಾಹನವು, ಜಿಲ್ಲೆಯ ಆಯ್ದ 20 ಗ್ರಾಮಗಳಲ್ಲಿ ಸಂಚರಿಸಲಿದ್ದು, ಗ್ಯಾರಂಟಿ ಯೋಜನೆಗಳ ಕುರಿತು ವಿಡಿಯೋ ಪ್ರದರ್ಶನ ಹಾಗೂ ಯೋಜನೆಗಳ ಬಗ್ಗೆ ಕಲಾ ತಂಡದಿಂದ ಬೀದಿನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಕಲಾವಿದೆ ಚಂದ್ರಕಲಾ ಅವರ ನೇತೃತ್ವದ ಬೀದಿನಾಟಕ ಕಲಾ ತಂಡವು ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿತು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಸದಸ್ಯರುಗಳಾದ ನಜಾ ತಾಜ್, ಮುದಾಸಿರ್ ನವಾಜ್, ಶಶಿಕಿರಣ್, ನಿತೀಶ್ ಮುಲ್ಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!