ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗುರುಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ, ಚಿತ್ರದುರ್ಗ ಜಿಲ್ಲಾ ಯೋಗ ಸಂಸ್ಥೆ, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್ ಇವುಗಳ ಜಂಟಿ ಆಶ್ರಯದಲ್ಲಿ ವಿಶೇಷ 'ಗುರುವಂದನಾ ಕಾರ್ಯಕ್ರಮ'ವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ದಿನಾಂಕ 29 ಜುಲೈ 2026 (ಬುಧವಾರ) ರಂದು ಬೆಳಿಗ್ಗೆ 5:30 ಗಂಟೆಗೆ ನಗರದ ನೀಲಕಂಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘಟನೆಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧ್ಯಕ್ಷತೆ: ಯೋಗಾಚಾರ್ಯ ಎಲ್.ಎಸ್. ಚಿನ್ಮಯಾನಂದ.
ವಿಶೇಷ ಉಪನ್ಯಾಸ: ತಾರಿಣಿ ಶುಭದಾಯಿನಿ (ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು).
ಮುಖ್ಯ ಅತಿಥಿಗಳು:
ರೋ. ಜಗನ್ನಾಥ್ ಶೆಟ್ಟಿ (ಅಧ್ಯಕ್ಷರು, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್). ಎಂ.ವಿ. ರವಿ (ಕಾರ್ಯದರ್ಶಿ, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್).
ರೋ. ಸುನಿತಾ ರಮೇಶ್ (ಅಧ್ಯಕ್ಷರು, ಇನ್ನರ್ ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್).
ಸುಧಾ ನಾಗರಾಜ್ (ಕಾರ್ಯದರ್ಶಿ, ಇನ್ನರ್ ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್).
ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವುಳ್ಳ ಈ ಗುರುವಂದನಾ ಸಮಾರಂಭದಲ್ಲಿ ಸಾರ್ವಜನಿಕರು ಹಾಗೂ ಯೋಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.



