ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬರುವ ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಹಾಗೂ ಜನಪರ ವಿಷಯಗಳ ಪರವಾಗಿ ಧ್ವನಿ ಎತ್ತುವ ಕುರಿತು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಹಿರಿಯ ನಾಯಕರ ಜಂಟಿ ಸಭೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಿತು.
ಸಭೆಯಲ್ಲಿ ರಾಜ್ಯದ ಪ್ರಸ್ತುತ ಜ್ವಲಂತ ಸಮಸ್ಯೆಗಳು, ಜನವಿರೋಧಿ ನೀತಿಗಳು ಹಾಗೂ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ತೊಳೆಯುವ ತಂತ್ರಗಾರಿಕೆಯ ಕುರಿತು ಸುದೀರ್ಘ ವಿಸ್ತೃತ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖರು:
ಈ ಮಹತ್ವದ ಸಮಾಲೋಚನಾ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಸಂಸದ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಜೆಡಿಎಸ್ ನಾಯಕ ಎಸ್.ಎಲ್. ಬೋಜೇಗೌಡ, ಮಾಜಿ ಸಚಿವ ಸಿ.ಸಿ. ಪಾಟೀಲ್, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಿದ್ದರು.



