Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ಐದು ದಿನ ಭಾರೀ ಮಳೆ

Advertisement
Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರಾವಳಿ
, ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರೆಡ್​ ಅಲರ್ಟ್​: ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

11 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್: ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದೇಶದ ಹಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ವಿಶೇಷವಾಗಿ ದಕ್ಷಿಣ, ಪೂರ್ವ ಮತ್ತು ಪಶ್ಚಿಮ, ಕೇಂದ್ರ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಧಾರಾಕಾರ ಮಳೆ ಮುನ್ಸೂಚನೆ:
ಆಂಧ್ರಪ್ರದೇಶ ಕರಾವಳಿ
, ದಕ್ಷಿಣ ಛತ್ತೀಸ್​ಗಢ, ದಕ್ಷಿಣ ಒಡಿಶಾ, ತೆಲಂಗಾಣ, ಕರ್ನಾಟಕದ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ಮುಂಬೈ, ಗೋವಾ ಸೇರಿದಂತೆ ಕೊಂಕಣ, ಮಹಾರಾಷ್ಟ್ರ ಘಾಟ್​ ಹಾಗೂ ಕರ್ನಾಟಕದ ಕರಾವಳಿ ಮತ್ತು ಗುಜರಾತ್​ನಲ್ಲಿ ಇಂದು ಮತ್ತು ನಾಳೆ ಅಂದರೆ, ಆಗಸ್ಟ್​ 20 ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ