Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ-10ರವರೆಗೆ ಭಾರೀ ಮಳೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ಘೋಷಣೆ ಮಾಡಲಾಗಿದೆ. ಮೇ 7 ಮತ್ತು 8 ರಂದು ಗುಡುಗು ಸಹಿತ ಬಿರುಗಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮೇ 10ರವರೆಗೆ ಭಾರೀ ಮಳೆಯಾಗಲಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಉಡುಪಿ ಹಾಸನ, ಮಂಡ್ಯ, ಬೀದರ್‌, ಕಲಬುರಗಿ, ಶಿವಮೊಗ್ಗ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ರಾಮನಗರ, ರಾಯಚೂರು, ಬೀದರ್‌, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಜೊತೆಗೆ ಗುಡುಗು ಸಿಡಿಲು ಜೊತೆಗೆ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮಿ ಇರಲಿದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮೇ 7 ಹಾಗೂ 8 ರಂದು ಬೆಂಗಳೂರಿಗೆ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST