Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಟೆಕ್ ವೇಶ್ಯಾವಾಟಿಕೆ ದಂಧೆ ಪತ್ತೆ, 52 ಜನರ ಬಂಧನ

Advertisement
Advertisement

ಚಂದ್ರವಳ್ಳಿ ನ್ಯೂಸ್, ರಾಮನಗರ (ಉತ್ತರಾಖಂಡ):
ವಿಶ್ವವಿಖ್ಯಾತ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ಎಂದೇ ಪ್ರಸಿದ್ಧಿಯಾಗಿರುವ ಉತ್ತರಾಖಂಡದ ರಾಮನಗರದ ಐಷಾರಾಮಿ ರೆಸಾರ್ಟ್‌ವೊಂದರ ಮೇಲೆ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ.

ಹೋಂ ಸ್ಟೇ ಹಾಗೂ ರೆಸಾರ್ಟ್ ಹೆಸರಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಮತ್ತು ರೇವ್ ಪಾರ್ಟಿ ದಂಧೆಯನ್ನು ಬಯಲಿಗೆಳೆದಿದ್ದು, ಉದ್ಯಮಿ ಸೇರಿದಂತೆ ಒಟ್ಟು 52 ಜನರನ್ನು ಬಂಧಿಸಿದ್ದಾರೆ.

ಮಾನವ ಕಳ್ಳಸಾಗಣೆ ವಿರೋಧಿ ಘಟಕ, ವಿಶೇಷ ಕಾರ್ಯಾಚರಣೆ ಗುಂಪು ಹಾಗೂ ಸ್ಥಳೀಯ ರಾಮನಗರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ ಅಪ್ರಾಪ್ತ ಬಾಲಕಿಯರು ಸೇರಿದಂತೆ 10 ಮಹಿಳೆಯರನ್ನು ರಕ್ಷಿಸಲಾಗಿದ್ದು, ಅಕ್ರಮ ಚಟುವಟಿಕೆ ನಡೆಯುತ್ತಿದ್ದ ರೆಸಾರ್ಟ್ ಅನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ನೋಟು ಉಡಾಯಿಸಿ ಅಶ್ಲೀಲ ನೃತ್ಯ: ಸ್ಥಳದಲ್ಲೇ ಸಿಕ್ಕಿಬಿದ್ದ ಗ್ರಾಹಕರು
ವಿವಿಧ ರಾಜ್ಯಗಳು ಹಾಗೂ ವಿದೇಶಗಳಿಂದ ಮಹಿಳೆಯರನ್ನು ಕರೆತಂದು ಇಲ್ಲಿ ಸಂಘಟಿತವಾಗಿ ವೇಶ್ಯಾವಾಟಿಕೆ ಜಾಲ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ ರೆಸಾರ್ಟ್‌ನಲ್ಲಿ ಮದ್ಯದ ಪಾರ್ಟಿ ಜೋರಾಗಿ ಸಾಗಿತ್ತು. ಅತಿಥಿಗಳು ಮಹಿಳೆಯರ ಮೇಲೆ ನೋಟುಗಳನ್ನು ಎಸೆಯುತ್ತಾ, ಅವರಿಗೆ ಅಶ್ಲೀಲ ನೃತ್ಯ ಪ್ರದರ್ಶಿಸುವಂತೆ ಒತ್ತಾಯಿಸುತ್ತಿದ್ದ ದೃಶ್ಯ ಕಂಡುಬಂದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ವೇಳೆ ಆವರಣದಲ್ಲಿದ್ದ ಹಲವಾರು ಆಕ್ಷೇಪಾರ್ಹ ವಸ್ತುಗಳು ಹಾಗೂ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಎರಡು ದಿನದ ಪಾರ್ಟಿಗೆ ಲಕ್ಷಾಂತರ ರೂಪಾಯಿ ಡೀಲ್!:
ಪೊಲೀಸ್ ತನಿಖೆಯ ಪ್ರಕಾರ, ಮೀರತ್ ಮೂಲದ ಉದ್ಯಮಿ ಉಮೇಂದ್ರ ಕುಮಾರ್ ಎಂಬಾತ ಈ ಪಾರ್ಟಿಯನ್ನು ಆಯೋಜಿಸಿದ್ದ. ಪಾರ್ಟಿಗಾಗಿ ಜುಲೈ 4 ಮತ್ತು 5 ರಂದು ಬುಕ್ಕಿಂಗ್ ಮಾಡಲಾಗಿತ್ತು. ಕೇವಲ ಎರಡು ದಿನಗಳಲ್ಲಿ ಸುಮಾರು 2.25 ಲಕ್ಷ ರೂಪಾಯಿ ಕಲೆಕ್ಷನ್ ಆಗಿತ್ತು ಎಂದು ತಿಳಿದುಬಂದಿದೆ. ಪಾರ್ಟಿಯಲ್ಲಿದ್ದ ಪ್ರತಿ ಮಹಿಳೆಗೆ ತಲಾ 10 ಸಾವಿರ ರೂಪಾಯಿ ನೀಡಲಾಗಿತ್ತು ಎಂದು ಹೇಳಲಾಗಿದೆ.

news_1783434706_6_540.jpg

 

ಪೋಕ್ಸೋ ಸೇರಿದಂತೆ ಗಂಭೀರ ಕಾಯ್ದೆಗಳಡಿ ಕೇಸ್ ದಾಖಲು:
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 52 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತೆಯರನ್ನು ಬಳಸಿಕೊಂಡಿರುವುದರಿಂದ ಅಕ್ರಮ ಮಾನವ ಕಳ್ಳಸಾಗಾಣಿಕೆ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ, ಅಬಕಾರಿ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯಡಿ ಗಂಭೀರ ಮೊಕದ್ದಮೆಗಳನ್ನು ಹೂಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.